ಟೂರ್ನಿಯ ಮೊದಲ ಪಂದ್ಯ ಆತಿಥೇಯ ಭಾರತ ಮತ್ತು ವೆಸ್ಟ್‌ಇಂಡೀಸ್ ತಂಡಗಳ ನಡುವೆ ದೆಹಲಿಯಲ್ಲಿ ನಡೆಯಲಿದೆ

ನವದೆಹಲಿ(ನ.16): ಮುಂದಿನ ಜನವರಿ 31 ರಿಂದ ಫೆಬ್ರವರಿ 12 ರವರೆಗೆ ನಡೆಯುವ ಟಿ20 ಅಂಧರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಭಾರತ ಆತಿಥ್ಯ ಹೊತ್ತಿದೆ.

ಟೂರ್ನಿಯ ಮೊದಲ ಪಂದ್ಯ ಆತಿಥೇಯ ಭಾರತ ಮತ್ತು ವೆಸ್ಟ್‌ಇಂಡೀಸ್ ತಂಡಗಳ ನಡುವೆ ದೆಹಲಿಯಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಪಾಕಿಸ್ತಾನ ಅಂಧರ ತಂಡ ಕೂಡ ಭಾಗವಹಿಸುತ್ತಿದೆ.

ಇನ್ನು ಬೆಂಗಳೂರಿನಲ್ಲಿ ಫೈನಲ್ ಪಂದ್ಯವನ್ನು ನಡೆಸಲು ಉದ್ದೇಶಿಸಲಾಗಿದೆ. ರೂ. 24.5ಕೋಟಿ ವೆಚ್ಚದಲ್ಲಿ ಟೂರ್ನಿಯನ್ನು ನಡೆಸಲಾಗುತ್ತಿದೆ ಎಂದು ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಭಾರತ ಅಂಧರ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಜಿ.ಕೆ. ಮಹಾಂತೇಶ್ ಹೇಳಿದರು. ಈ ವೇಳೆ ಮಾಜಿ ಕ್ರಿಕೆಟಿಗ ದಿಲೀಪ್ ವೆಂಗ್‌ಸರ್ಕಾರ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಈ ಟೂರ್ನಿಯ ರಾಯಭಾರಿಯಾಗಿ ರಾಹುಲ್ ದ್ರಾವಿಡ್ ಆಯ್ಕೆಯಾಗಿದ್ದಾ