ಬೆಂಗಳೂರು(ಫೆ.15): ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಸರಣಿ ಜ್ವರ ಹೆಚ್ಚಾಗುತ್ತಿದೆ. ನ್ಯೂಜಿಲೆಂಡ್ ಪ್ರವಾಸದ ಬಳಿಕ ವಿಶ್ರಾಂತಿಗೆ ಜಾರಿರುವ ಟೀಂ ಇಂಡಿಯಾ ಇದೀಗ ಅಭ್ಯಾಸ ಆರಂಭಿಸಲಿದೆ. ಆಯ್ಕೆ ಸಮಿತಿ ಬಲಿಷ್ಠ ಭಾರತ ತಂಡವನ್ನ ಪ್ರಕಟಿಸಿದೆ. ಫೆ.24 ರಿಂದ ಆಸಿಸ್ ವಿರುದ್ಧದ ಸರಣಿ ಆರಂಭಗೊಳ್ಳಲಿದೆ.

ಇದನ್ನೂ ಓದಿ:ಭಾರತ-ಆಸ್ಟ್ರೇಲಿಯಾ ಟಿ20, ಏಕದಿನ ಸರಣಿ ವೇಳಾಪಟ್ಟಿ ಇಲ್ಲಿದೆ!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2ನೇ ಟಿ20 ಪಂದ್ಯ ನಡೆಯಲಿದೆ. ಫೆ.16ರಿಂದ ಆನ್‌ಲೈನ್ ಟಿಕೆಟ್ ಮಾರಾಟ ಆರಂಭಗೊಳ್ಳಲಿದೆ. ಬೆಳಗ್ಗೆ 10 ಗಂಟೆಯಿಂದ ಆನ್‌ಲೈನ್ ಮಾರಾಟ ಆರಂಭವಾಗಲಿದೆ. ಇನ್ನು ಫೆ.19 ರಿಂದ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಇರೋ ಗೇಟ್ ಕೌಂಟರ್‌ಗಳು ಪಂದ್ಯದ ಟಿಕೆಟ್ ಮಾರಾಟ ಆರಂಭವಾಗಲಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ!

750 ರೂಪಾಯಿಯಿಂದ 10,000 ರೂಪಾಯಿ ವರೆಗಿನ ಟಿಕೆಟ್‌ಗಳು ಲಭ್ಯವಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮಾಧ್ಯಮ ವಕ್ತಾರ ವಿನಯ್ ಮೃತ್ಯುಂಜಯ್ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಭಾರತ 2 ಟಿ20 ಹಾಗೂ 5 ಏಕದಿನ ಪಂದ್ಯಗಳ ಸರಣಿ ಆಡಲಿದೆ.