ಸಿಡ್ನಿ(ಜ.02): ಆಸ್ಟ್ರೇಲಿಯಾ ವಿರುದ್ದದ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ 13 ಸದಸ್ಯರ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ತಂದೆಯಾಗಿ ಬಡ್ತಿ ಪಡೆದಿರುವ ರೋಹಿತ್ ಶರ್ಮಾ ತವರಿಗೆ ವಾಪಾಸ್ಸಾಗಿದ್ದಾರೆ. ಹೀಗಾಗಿ ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಲಭ್ಯರಿಲ್ಲ. ರೋಹಿತ್  ಶರ್ಮಾ ಸ್ಥಾನದಲ್ಲಿ ಇದೀಗ ಕನ್ನಡಿಗ ಕೆಎಲ್ ರಾಹುಲ್‌ಗೆ ಮಣೆ ಹಾಕಲಾಗಿದೆ.

ಇದನ್ನೂ ಓದಿ: ರಿಷಬ್‌ಗೆ ಸ್ಲೆಡ್ಜ್ ಮಾಡಿ ಕೈಸುಟ್ಟುಕೊಂಡ ಪೈನೆ- ಫೋಟೋ ವೈರಲ್!

ರಾಹುಲ್ ಆಗಮನದಿಂದ, ಕಳೆದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಹನುಮಾ ವಿಹಾರಿ ಇದೀಗ ಮತ್ತೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಸಿಡ್ನಿ ಪಂದ್ಯದಲ್ಲಿ ಕನ್ನಡಿಗರಾದ ಮಯಾಂಕ್ ಅಗರ್ವಾಲ್-ಹಾಗೂ ಕೆ.ಎಲ್. ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾ ಪ್ರಧಾನಿ ಮಾರಿಸನ್ ಭೇಟಿ ಮಾಡಿದ ಕೊಹ್ಲಿ ಬಾಯ್ಸ್!

ಟೀಂ ಇಂಡಿಯಾ:
ವಿರಾಟ್ ಕೊಹ್ಲಿ(ನಾಯಕ), ಮಯಾಂಕ್ ಅಗರ್ವಾಲ್, ಕೆ.ಎಲ್.ರಾಹುಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ರಿಷಬ್ ಪಂತ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ