ಬೆಂಗಳೂರು(ಫೆ.20):  ಆಸ್ಟ್ರೇಲಿಯಾ ವಿರುದ್ದದ 2ನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಿದೆ.  ಫೆ.27 ರಂದು  ಈ ಟಿ20 ಪಂದ್ಯದ ಟಿಕೆಟ್‌ನ್ನು ಕ್ರೀಡಾಂಗಣದ ಕೌಂಟರ್‌ನಲ್ಲಿ ಪಡೆಯಲು ಮಂಗಳವಾರ ಅಭಿಮಾನಿಗಳು ಮುಗಿಬಿದ್ದಿದ್ದರು. 

ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಬೆಂಗಳೂರು ಟಿ20 ಪಂದ್ಯ-ಎಲ್ಲಿ ಸಿಗಲಿದೆ ಟಿಕೆಟ್?

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕ್ರಿಕೆಟ್‌ ಅಭಿಮಾನಿಗಳು ಸರದಿ ಸಾಲಿನಲ್ಲಿ ನಿಂತು ಟಿಕೆಟ್‌ ಖರೀದಿಸಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್‌್ತ ಮಾಡಲಾಗಿತ್ತು. ಅಲ್ಲದೇ ಕೌಂಟರ್‌ನ ಎದುರುಗಡೆ ಕ್ಯಾಮೆರಾ ಒಂದನ್ನು ಹಾಕಲಾಗಿದ್ದು ಟಿಕೆಟ್‌ ಮಾರಾಟ ಪಾರದರ್ಶಕವಾಗಿ ನಡೆಯುವಂತೆ ಎಚ್ಚರ ವಹಿಸಲಾಯಿತು.

ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಟಿ20, ಏಕದಿನ ಸರಣಿ ವೇಳಾಪಟ್ಟಿ ಇಲ್ಲಿದೆ!

ಫೆ.24 ರಿಂದ ಆಸ್ಟ್ರೇಲಿಯಾ ವಿರುದ್ಧದ ಸರಣಿ ಆರಂಭಗೊಳ್ಳಲಿದೆ. ವಿಶಾಖಪಟ್ಟಣದಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. 2 ಟಿ20 ಪಂದ್ಯಗಳ ಬಳಿಕ 5 ಏಕದಿನ ಪಂದ್ಯ ನಡೆಯಲಿದೆ. ಮಾರ್ಚ್ 2 ರಿಂದ ಮಾರ್ಚ್ 13ರ ವರೆಗೆ ಏಕದಿನ ಸರಣಿ ಆಯೋಜನೆಯಾಗಲಿದೆ.