ರಾಂಚಿ(ಮಾ.07): ಆಸ್ಟ್ರೇಲಿಯಾ ವಿರುದ್ದದ ಆರಂಭಿಕ 2 ಏಕದಿನ ಪಂದ್ಯ ಗೆದ್ದಿರುವ ಟೀಂ ಇಂಡಿಯಾ ಇದೀಗ 3ನೇ ಗೆಲುವನ್ನು ಎದುರುನೋಡುತ್ತಿದೆ. ಮಾ.08 ರಂದು ನಡೆಯಲಿರುವ 3ನೇ ಪಂದ್ಯಕ್ಕೆ ಉಭಯ ತಂಡಗಳು ಭರ್ಜರಿ ತಯಾರಿ ನಡೆಸಿದೆ. ಸರಣಿ ಗೆಲುವಿಗೆ ಹೊಂಚು ಹಾಕಿರುವ ಟೀಂ ಇಂಡಿಯಾ ತಂಡದಲ್ಲಿ 2 ಬದಲಾವಣೆ ಮಾಡೋ ಸಾಧ್ಯತೆ ಇದೆ.

ಇದನ್ನೂ ಓದಿ: ಸಿಕ್ಸರ್ ಚಾಲೆಂಜ್- ಅಭ್ಯಾಸದ ವೇಳೆ ಟೀಂ ಇಂಡಿಯಾ ಕ್ರಿಕೆಟಿಗರ ಫನ್!

ಕಳೆದೆರಡು ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿರುವ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಹಾಗೂ ಮಿಡ್ಲ್ ಆರ್ಡರ್ ಬ್ಯಾಟ್ಸ್‌ಮನ್ ಅಂಬಾಟಿ ರಾಯುಡು ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇವರ ಬದಲು ಕನ್ನಡಿಗ ಕೆ.ಎಲ್.ರಾಹುಲ್ ಹಾಗೂ ರಿಷಬ್ ಪಂತ್ ತಂಡಕ್ಕೆ ಲಗ್ಗೆ ಇಡುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ಧೋನಿ ಮನೆಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಡಿನ್ನರ್!

ಸಂಭವನೀಯ ತಂಡ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ಎಂ.ಎಸ್.ಧೋನಿ, ರಿಷಬ್ ಪಂತ್, ಕೇದಾರ್ ಜಾಧವ್, ವಿಜಯ್ ಶಂಕರ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ