ಮುಂಬೈ(ಫೆ.14): ನ್ಯೂಜಿಲೆಂಡ್ ಪ್ರವಾಸ ಮುಗಿಸಿ ವಿಶ್ರಾಂತಿ ಜಾರಿರುವ ಟೀಂ ಇಂಡಿಯಾ ಇದೇ 24 ರಿಂದ ಆಸ್ಟ್ರೇಲಿಯಾ ವಿರುದ್ಧದ ಸರಣಿ ಆಡಲಿದೆ. 2 ಟಿ20 ಹಾಗೂ 5 ಏಕದಿನ ಪಂದ್ಯಗಳ ಸರಣಿಗಾಗಿ ಬಿಸಿಸಿಐ ಆಯ್ಕೆ ಸಮಿತಿ ನಾಳೆ(ಫೆ.15) ತಂಡ ಆಯ್ಕೆ ಮಾಡಲಿದೆ. ನ್ಯೂಜಿಲೆಂಡ್ ವಿರುದ್ದದ ಅಂತಿಮ 2 ಏಕದಿನ ಹಾಗೂ 3 ಟಿ20 ಪಂದ್ಯಗಳಿಂದ ವಿಶ್ರಾಂತಿ ಪಡೆದಿದ್ದ ನಾಯಕ ವಿರಾಟ್ ಕೊಹ್ಲಿ ಕಮ್‌ಬ್ಯಾಕ್ ಮಾಡೋ ಸಾಧ್ಯತೆ ಇದೆ.

ಇದನ್ನೂ ಓದಿ: ಬಹಿರಂಗವಾಯ್ತು ಧೋನಿ ಹ್ಯಾಟ್ರಿಕ್ ಅರ್ಧಶತಕದ ರಹಸ್ಯ!

2019ರ ವಿಶ್ವಕಪ್ ಟೂರ್ನಿ ದೃಷ್ಟಿಯಿಂದ ತಂಡದಲ್ಲಿ ಕೆಲ ಬದಲಾವಣೆ ಮಾಡೋ ಸಾಧ್ಯತೆಗಳಿವೆ. ಸ್ಫೋಟಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡೋ ಸಾಧ್ಯತೆ ಹೆಚ್ಚಿದೆ. ಇನ್ನು ರಿಷಬ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ಈ ಸರಣಿ ನಿರ್ಣಾಯವಾಗಿದ್ದು, ಶ್ರೇಷ್ಠ ಪ್ರದರ್ಶನ ನೀಡಿದವರು ಎಂ.ಎಸ್.ಧೋನಿಗೆ ಬ್ಯಾಕ್ ಅಪ್ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಲಿದ್ದಾರೆ.

ಇದನ್ನೂ ಓದಿ: ಜಾಂಟಿ ರೋಡ್ಸ್‌ಗೆ ಮೋಡಿ ಮಾಡಿದ ಆಧುನಿಕ ಕ್ರಿಕೆಟ್‌ನ ನಂ.1 ಫೀಲ್ಡರ್ ಈತ!

ಇಂಗ್ಲೆಂಡ್ ಲಯನ್ಸ್ ವಿರುದ್ಧ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಫಾರ್ಮ್‌ಗೆ ಮರಳಿರುವ ಕೆ.ಎಲ್.ರಾಹುಲ್ ಸ್ಥಾನ ನೀಡೋ ಸಾಧ್ಯತೆ ಹೆಚ್ಚಿದೆ. ಈ ಮೂಲಕ ವಿಶ್ವಕಪ್ ಟೂರ್ನಿಗೆ 3ನೇ ಆರಂಭಿಕ ಸ್ಥಾನ ಯಾರು ಸೂಕ್ತ ಅನ್ನೋದು ಈ ಸರಣಿ ಬಳಿಕ ಸ್ಪಷ್ಟವಾಗಲಿದೆ.

ಇದನ್ನೂ ಓದಿ: ಬಂಡಾಯ ಕಬಡ್ಡಿ ಲೀಗ್‌ಗೆ ಭರ್ಜರಿ ಪ್ರತಿಕ್ರಿಯೆ!

ಇಂಜುರಿಯಿಂದ ನ್ಯೂಜಿಲೆಂಡ್ ಸರಣಿಯಿಂದ ಹೊರಗುಳಿದಿದ್ದ ವೇಗಿ ಜಸ್ಪ್ರೀತ್ ಬುಮ್ರಾ ತಂಡಕ್ಕೆ ವಾಪಾಸ್ಸಾಗೋ ಸಾಧ್ಯತೆ ಹೆಚ್ಚಿದೆ. ಇನ್ನುಳಿದಂತೆ ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ವೇಗದ ಸಾರಥ್ಯ ವಹಿಸಲಿದ್ದಾರೆ. ಇನ್ನು ಯಜುವೇಂದ್ರ ಚೆಹಾಲ್, ಕುಲ್ದೀಪ್ ಯಾದವ್ ಸ್ಪಿನ್ ವಿಭಾಗದ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಜೊತೆಗೆ ಆಲ್ರೌಂಡರ್ ಕೋಟಾದಲ್ಲಿ ರವೀಂದ್ರ ಜಡೇಜಾ ಹಾಗೂ ಹಾರ್ದಿಕ್ ಪಾಂಡ್ಯ ಸ್ಥಾನ ಬಹುತೇಕ ಖಚಿತ.