ಪರ್ತ್(ಡಿ.12): ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆದ್ದಿರುವ ಟೀಂ ಇಂಡಿಯಾ ಇದೀಗ 2ನೇ ಪಂದ್ಯಕ್ಕೆ ಕಸರತ್ತು ಆರಂಭಿಸಿದೆ. ಪರ್ತ್‌ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಕೆಲ ಬದಲಾವಣೆ ಮಾಡಲು ಟೀಂ ಇಂಡಿಯಾ ಮುಂದಾಗಿದೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ ದಿನನಿತ್ಯ ಆಹಾರ ಪದ್ಧತಿ ಹೇಗಿದೆ?

ಪರ್ತ್ ಮೈದಾನ ವೇಗಿಗಳಿಗೆ ಹೆಚ್ಚು ನೆರವು ನೀಡಲಿದೆ. ಹೀಗಾಗಿ ಟೀಂ ಇಂಡಿಯಾ ನಾಲ್ವರು ವೇಗಿಗಳನ್ನ ಕಣಕ್ಕಿಳಿಸಲು ಮುಂದಾಗಿದೆ. ಹೀಗಾದಲ್ಲಿ ಮೊದಲ ಪಂದ್ಯದಲ್ಲಿ ನೀರಸ ಪ್ರದರ್ಶನ ನೀಡಿದ ರೋಹಿತ್ ಶರ್ಮಾ ಮತ್ತೆ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ.

ಇದನ್ನೂ ಓದಿ: ಇಂಡೋ-ಆಸಿಸ್ ಟೆಸ್ಟ್: 2ನೇ ಪಂದ್ಯಕ್ಕೂ ಮೊದಲೇ ಭಾರತಕ್ಕೆ ಹಿನ್ನಡೆ!

ರೋಹಿತ್ ಬದಲು ಉಮೇಶ್ ಯಾದವ್ ತಂಡ ಸೇರಿಕೊಳ್ಳೋ ಸಾಧ್ಯತೆ ಹೆಚ್ಚಿದೆ. ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ ಹಾಗೂ ಉಮೇಶ್ ಯಾದವ್  ವೇಗದ ಸಾರಥ್ಯವಹಿಸಲಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್‌ಗಳಿಗೆ ಶಾಕ್ ನೀಡಲು ರೆಡಿಯಾಗಿದೆ.