ರಾಂಚಿ(ಮಾ.08): ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದ ಗೆಲುವಿಗೆ 314 ರನ್ ಬೃಹತ್ ಟಾರ್ಗೆಟ್ ಪಡೆದ ಟೀಂ ಇಂಡಿಯಾ ಆಸಿಸ್ ದಾಳಿಗೆ ತತ್ತರಿಸಿದೆ. ಆದರೆ ನಾಯಕ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನೀಡಿದ್ದಾರೆ. ಈ ಮೂಲಕ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. 

ಇದನ್ನೂ ಓದಿ: ರಾಂಚಿ ಪಂದ್ಯವನ್ನು ಸೈನಿಕರಿಗೆ ಅರ್ಪಿಸಿದ ಟೀಂ ಇಂಡಿಯಾ

ಏಕದಿನ ಕ್ರಿಕೆಟ್‌ನಲ್ಲಿ 41ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ, ಆಸಿಸ್ ಸರಣಿಯಲ್ಲಿ ಸತತ 2ನೇ ಶತಕ ಸಿಡಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಒಂದೆಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೂ, ವಿರಾಟ್ ಕೊಹ್ಲಿ ಮಾತ್ರ ಆಸಿಸ್ ಬೌಲರ್‌ಗಳ ಬೆವರಿಳಿಸಿದರು. ಈ ಮೂಲಕ 85 ಎಸೆತದಲ್ಲಿ ಶತಕ ಪೂರೈಸಿದರು.

ಇದನ್ನೂ ಓದಿ: ಮಹಿಳಾ ದಿನಾಚರಣೆ: ತಾಯಿಗೆ ವಿಶೇಷ ಉಡುಗೊರೆ ನೀಡಿದ ಸಚಿನ್!

314 ರನ್ ಟಾರ್ಗೆಟ್ ಬೆನ್ನಟ್ಟಲು ಕಣಕ್ಕಿಳಿದ ಟೀಂ ಇಂಡಿಯಾ ಆರಂದಿಂದಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಶಿಖರ್ ಧವನ್ 1, ರೋಹಿತ್ ಶರ್ಮಾ 14, ಅಂಬಾಟಿ ರಾಯುಡು 2 ರನ್ ಸಿಡಿಸಿ ನಿರ್ಗಮಿಸಿದರು. ತವರಿನಲ್ಲಿ ಎಂ.ಎಸ್.ಧೋನಿ ಕೇವಲ 26 ರನ್ ಸಿಡಿಸಿ ನಿರಾಸೆ ಮೂಡಿಸಿದರು. ಕೇದಾರ್ ಜಾಧವ್ 26 ರನ್ ಸಿಡಿಸಿ ನಿರ್ಗಮಿಸಿದರು.