Asianet Suvarna News Asianet Suvarna News

ಬಾಕ್ಸಿಂಗ್ ಡೇ ಟೆಸ್ಟ್: ಮಯಾಂಕ್ ಅಬ್ಬರ-ಮೇಲುಗೈ ಸಾಧಿಸಿದ ಭಾರತ!

ಮೆಲ್ಬರ್ನ್ ಟೆಸ್ಟ್ ಪಂದ್ಯದ ಮೊದಲ ದಿನ ಟೀಂ ಇಂಡಿಯಾ ಅಬ್ಬರಿಸಿದೆ. ಮಹತ್ವದ ಪಂದ್ಯದಲ್ಲಿ ಉತ್ತಮ ಆರಂಭ ಮಾಡಿರುವ ಟೀಂ ಇಂಡಿಯಾ ಇದೀಗ 2ನೇ ದಿನವೂ ಅಬ್ಬರಿಸೋ ವಿಶ್ವಾಸದಲ್ಲಿದೆ. ಕನ್ನಡಿಗ ಮಯಾಂಕ್ ಪದಾರ್ಪಣೆ, ಪೂಜಾರ ಅರ್ಧಶತಕ ಹಾಗೂ ವಿರಾಟ್ ಕೊಹ್ಲಿ ಜವಾಬ್ದಾರಿಯುತ ಆಟ ಮೊದಲ ದಿನದ ಹೈಲೈಟ್ಸ್.
 

India Vs Australia cricket Visitors dominate day 1 in Melbourne test
Author
Bengaluru, First Published Dec 26, 2018, 1:16 PM IST

ಮೆಲ್ಬರ್ನ್(ಡಿ.26): ಕನ್ನಡಿಗ ಮಯಾಂಕ್ ಅಗರ್ವಾಲ್ ಪದಾರ್ಪಣೆ ಪಂದ್ಯದಲ್ಲೇ ಅರ್ಧಶತಕ, ಚೇತೇಶ್ವರ್ ಪೂಜಾರ ಹಾಗೂ ನಾಯಕ ವಿರಾಟ್ ಕೊಹ್ಲಿ ಜವಾಬ್ದಾರಿಯುತ ಆಟದಿಂದ ಆಸ್ಟ್ರೇಲಿಯಾ ವಿರುದ್ಧದ ಮೆಲ್ಬರ್ನ್ ಟೆಸ್ಟ್ ಪಂದ್ಯದ ಮೊದಲ ದಿನ ಭಾರತ ಮೇಲುಗೈ ಸಾಧಿಸಿದೆ. 

ಇದನ್ನೂ ಓದಿ: ಜಗತ್ತಿಗೆ ನಾನ್ಯಾರು ಎಂದು ಹೇಳುವ ಅಗತ್ಯವಿಲ್ಲ: ವಿರಾಟ್ ಖಡಕ್ ಉತ್ತರ

ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಹೊಸ ಆರಂಭಿಕರನ್ನ ಕಣಕ್ಕಿಳಿಸಿತು. ಕನ್ನಡಿಗ ಮಯಾಂಕ್ ಅಗರ್ವಾಲ್ ಹಾಗೂ ಹನುಮಾ ವಿಹಾರಿ ಆರಂಭಿಕರಾಗಿ ಕಣಕ್ಕಿಳಿದರು. ವಿಹಾರಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆದರೆ ಮಯಾಂಕ್ ಚೊಚ್ಚಲ ಪಂದ್ಯದಲ್ಲೇ ಅದ್ಬುತ ಪ್ರದರ್ಶನ ನೀಡಿ ಅರ್ಧಶತಕ ಸಿಡಿಸಿದರು.

ಇದನ್ನೂ ಓದಿ: ಮೆಲ್ಬರ್ನ್ ಟೆಸ್ಟ್: ಮಯಾಂಕ್ ಅಗರ್’ವಾಲ್ ಭರ್ಜರಿ ಅರ್ಧಶತಕ

ಮಯಾಂಕ್ ಅಗರ್ವಾಲ್ 76 ರನ್ ಸಿಡಿಸಿ ಔಟಾದರು. ಚೇತೇಶ್ವರ್ ಪೂಜಾರ ಹಾಗೂ ನಾಯಕ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು. ಹೀಗಾಗಿ ಭಾರತ 200 ರನ್ ಗಡಿ ದಾಟಿತು. ಪೂಜಾರ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. 

ಇದನ್ನೂ ಓದಿ: ಇಂಡೋ-ಆಸಿಸ್ ಟೆಸ್ಟ್: ಕನ್ನಡಿಗ ಮಯಾಂಕ್ ಕೋಚ್ ಜೊತೆ Exclusive ಸಂದರ್ಶನ

ದಿನದಾಟದ ಅಂತ್ಯದಲ್ಲಿ ಭಾರತ 2 ವಿಕೆಟ್ ನಷ್ಟಕ್ಕೆ 215 ರನ್ ಸಿಡಿಸಿತು. ಪೂಜಾರ ಅಜೇಯ 68 ಹಾಗೂ ವಿರಾಟ್ ಕೊಹ್ಲಿ ಅಜೇಯ 47 ರನ್ ಸಿಡಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ಆಸಿಸ್ ಪರ ಪ್ಯಾಟ್ ಕಮಿನ್ಸ್ 2 ವಿಕೆಟ್ ಕಬಳಿಸಿದರು. 

Follow Us:
Download App:
  • android
  • ios