ಹೈದರಾಬಾದ್(ಮಾ.02): ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಉಪ್ಪಳ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಕ್ಕೆ ಬಲಿಷ್ಠ ತಂಡವನ್ನು ಆಸ್ಟ್ರೇಲಿಯಾ ಕಣಕ್ಕಿಳಿಸಿದೆ. ಇತ್ತ ಟೀಂ ಇಂಡಿಯಾ ಗೆಲುವಿಗಾಗಿ ಬ್ಯಾಲೆನ್ಸ್ ಟೀಂ ಪ್ರಕಟಿಸಿದೆ.

ಇದನ್ನೂ ಓದಿ: ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ನ್ಯೂಜಿಲೆಂಡ್ ಆಟಗಾರ್ತಿ ವಿಶಿಷ್ಠ ರೀತಿಯಲ್ಲಿ ಔಟ್!

ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳಲು ಸಜ್ಜಾಗಿರುವ ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಹಾಲ್‌ಗೆ ವಿಶ್ರಾಂತಿ ನೀಡಿದೆ. ಚಹಾಲ್ ಬದಲು ರವೀಂದ್ರ ಜಡೇಜಾಗೆ ಅವಕಾಶ ನೀಡಲಾಗಿದೆ. ಈ ಮೂಲಕ  ಜಡ್ಡು ಮತ್ತೆ ಬ್ಲೂ ಜರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಇಂಜುರಿಗೆ ತುತ್ತಾಗಿದ್ದ ಎಂ.ಎಸ್.ಧೋನಿ ಕಣಕ್ಕಿಳಿಯುವುದು ಖಚಿತವಾಗಿದೆ. 

ಟೀಂ ಇಂಡಿಯಾ:
ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಅಂಬಾಟಿ ರಾಯುಡು, ಎಂ.ಎಸ್.ಧೋನಿ, ವಿಜಯ್  ಶಂಕರ್, ಕೇದಾರ್ ಜಾಧವ್, ರವೀಂದ್ರ, ಜಡೇಜಾ ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ,