ದೆಹಲಿ(ಮಾ.13): ಭಾರತ ವಿರುದ್ಧದ 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟಾಸ್ ಸೋತಿರುವ ಟೀಂ ಇಂಡಿಯಾ ದೆಹಲಿ ಪಂದ್ಯಕ್ಕಾಗಿ ತಂಡದಲ್ಲಿ2 ಬದಲಾವಣೆ ಮಾಡಿದೆ. ಕೆಎಲ್ ರಾಹುಲ್ ಹಾಗೂ ಯಜುವೇಂದ್ರ ಚಹಾಲ್‌ಗೆ ವಿಶ್ರಾಂತಿ ನೀಡಲಾಗಿದ್ದು, ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ತಂಡ ಸೇರಿಕೊಂಡಿದ್ದಾರೆ.

ಆಸ್ಟ್ರೇಲಿಯಾ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಶಾನ್ ಮಾರ್ಶ್ ಬದಲು ಮಾರ್ಕಸ್ ಸ್ಟೊಯ್ನಿಸ್ ತಂಡ ಸೇರಿಕೊಂಡಿದ್ದಾರೆ. ಇಂಜುರಿಯಿಂದ ಬೆಹೆನ್‌ಡ್ರಾಫ್ ಬದಲು ನಥನ್ ಲಿಯೋನ್ ತಂಡ ಸೇರಿಕೊಂಡಿದ್ದಾರೆ. 

ಆರಂಭಿಕ 2 ಪಂದ್ಯ ಗೆದ್ದ ಟೀಂ ಇಂಡಿಯಾ ನಂತರ 2 ಪಂದ್ಯದಲ್ಲಿ ಸೋಲು ಅನುಭವಿಸಿತ್ತು. ಹೀಗಾಗಿ ಸದ್ಯ ಸರಣಿ 2-2 ಅಂತರದಲ್ಲಿ ಸಮಬಲಗೊಂಡಿದೆ. ಹೀಗಾಗಿ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ಅಂತಿಮ ಪಂದ್ಯ ಗೆದ್ದ ತಂಡ ಸರಣಿ ಕೈವಶ ಮಾಡಲಿದೆ.