ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಮೊದಲ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳಲು ಸಜ್ಜಾಗಿರುವ ಟೀಂ ಇಂಡಿಯಾ ಬಲಿಷ್ಠ ತಂಡದೊಂದಿದೆ ಕಣಕ್ಕಿಳಿದಿದೆ. ಇಲ್ಲಿದೆ ಟೀಂ ಇಂಡಿಯಾ ಪ್ಲೇಯಿಂಗ್ 11 ವಿವರ.
ಆಡಿಲೆಡ್(ಜ.15):ಭಾರತ ವಿರುದ್ದದ 2ನೇ ಏಕದಿನ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ಸರಣಿಯಲ್ಲಿ ಸತತ 2ನೇ ಬಾರಿಗೆ ಆಸ್ಟ್ರೇಲಿಯಾ ಟಾಸ್ ಗೆಲುವಿನ ಸಿಹಿ ಕಂಡಿದೆ. ಮೊದಲ ಪಂದ್ಯದಲ್ಲಿ 34 ರನ್ ಗೆಲುವು ಸಾಧಿಸಿದ್ದ ಆಸ್ಟ್ರೇಲಿಯಾ ಇದೀಗ 2ನೇ ಪಂದ್ಯ ಗೆದ್ದು ಸರಣಿ ಗೆಲುವಿನ ವಿಶ್ವಾಸದಲ್ಲಿದೆ.
ಮಹತ್ವದ ಪಂದ್ಯಕ್ಕಾಗಿ ಟೀಂ ಇಂಡಿಯಾ ಒಂದು ಬದಲಾವಣೆ ಮಾಡಿದೆ. ವೇಗಿ ಖಲೀಲ್ ಅಹಮ್ಮದ್ ಬದಲು, ಹೈದರಬಾದ್ ವೇಗಿ ಮೊಹಮ್ಮದ್ ಸಿರಾಜ್ ತಂಡ ಸೇರಿಕೊಂಡಿದ್ದಾರೆ. ಈ ಮೂಲಕ ಸಿರಾಜ್ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾರೆ.
ಟೀಂ ಇಂಡಿಯಾ:
ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಅಂಬಾಟಿ ರಾಯುಡು, ಎಂ.ಎಸ್.ಧೋನಿ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ
