ದೆಹಲಿ(ಮಾ.13): ಆಸ್ಟ್ರೇಲಿಯಾ ವಿರುದ್ಧದ 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿನತ್ತ ಮುಖಮಾಡಿದೆ.  ದೆಹಲಿಯಲ್ಲಿ ನಡೆಯುತ್ತಿರುವ ನಿರ್ಣಾಯಕ ಪಂದ್ಯದಲ್ಲಿ ಗೆಲುವಿಗೆ 273 ರನ್ ಟಾರ್ಗೆಟ್ ಪಡೆದಿರುವ ಭಾರತ ಇದೀಗ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ.

ಇದನ್ನೂ ಓದಿ: ಕೆ.ಎಲ್.ರಾಹುಲ್ ಪರ ಬ್ಯಾಟ್ ಬೀಸಿದ ಟ್ವಿಟರಿಗರು!

ಈಗಾಗಲೇ ಟಿ20 ಸರಣಿ ಗೆದ್ದಿರುವ ಆಸ್ಟ್ರೇಲಿಯಾ ಇದೀಗ ಏಕದಿನ ಸರಣಿಯಲ್ಲೂ ಭಾರತಕ್ಕೆ ಶಾಕ್ ನೀಡಲು ಸಜ್ಜಾಗಿದೆ. ರೋಹಿತ್ ಶರ್ಮಾ ಸಿಡಿಸಿದ ಅರ್ಧಶತಕ ಹೊರತು ಪಡಿಸಿದರೆ ಇತರ ಯಾವ ಬ್ಯಾಟ್ಸ್‌ಮನ್ ಕೂಡ ಅಬ್ಬರಿಸಲಿಲ್ಲ. ತವರಿನಲ್ಲಿ ಕೊಹ್ಲಿ ಬಾಯ್ಸ್, ಆ್ಯಡಮ್ ಜಂಪಾ ಸ್ಪಿನ್ ಮೋಡಿಗೆ ತತ್ತರಿಸಿದ್ದಾರೆ.

ರೋಹಿತ್ ಶರ್ಮಾ 89 ಎಸೆತದಲ್ಲಿ 56 ರನ್ ಸಿಡಿಸಿದರೆ, ಇತರ ಬ್ಯಾಟ್ಸ್‌ಮನ್‌ಗಳು ನಿರಾಸೆ ಮೂಡಿಸಿದರು. ಶಿಖರ್ ಧವನ್ 12,  ವಿರಾಟ್ ಕೊಹ್ಲಿ 20, ರಿಷಬ್ ಪಂತ್ 16, ರವೀಂದ್ರ ಜಡೇಜಾ ಶೂನ್ಯ ಸುತ್ತಿದರು. 132 ರನ್‌ಗೆ 6 ವಿಕೆಟ್ ಕಳೆದುಕೊಂಡು ಸರಣಿ ಸೋಲಿನ ಭೀತಿಯಲ್ಲಿದೆ.

ಇದನ್ನೂ ಓದಿ: ಚುನಾವಣಾ ದಿನಾಂಕ ನಿಗದಿ ಬೆನ್ನಲ್ಲೇ ಸಚಿನ್, ಕೊಹ್ಲಿ ನೆರವು ಕೇಳಿದ ಮೋದಿ!

ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 9 ವಿಕೆಟ್ ನಷ್ಟಕ್ಕೆ 272 ರನ್ ಸಿಡಿಸಿತು. ಉಸ್ಮಾನ್ ಖವಾಜ ಶತಕ ಸಿಡಿಸಿ ಅಬ್ಬರಿಸಿದರು. ಪೀಟರ್ ಹ್ಯಾಂಡ್ಸ್‌ಕಾಂಬ್ ಹಾಫ್ ಸೆಂಚುರಿ ಬಾರಿಸಿದರು. ಈ ಮೂಲಕ ಭಾರತಕ್ಕೆ 273 ರನ್ ಟಾರ್ಗೆಟ್ ನೀಡಿತು.