ಮಳೆ ಅಡ್ಡಿಯಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯದ ಮೊದಲ ಇನ್ನಿಂಗ್ಸ್ ತಡವಾಗಿ ಅಂತ್ಯವಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 4 ವಿಕೆಟ್ ನಷ್ಟಕ್ಕೆ 158 ರನ್ ಸಿಡಿಸಿದೆ.

ಬ್ರಿಸ್ಬೇನ್(ನ.21): ಭಾರತ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ 17 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 158 ರನ್ ಸಿಡಿಸಿತು. ಮಳೆಯಿಂದಾಗಿ ಪಂದ್ಯವನ್ನ 17 ಓವರ್‌ಗೆ ಸೀಮಿತಗೊಳಿಸಲಾಗಿದೆ. ಇಷ್ಟೇ ಅಲ್ಲ ಭಾರತಕ್ಕೆ ಡಕ್‌ವರ್ತ್ ನಿಯಮದ ಪ್ರಕಾರ 174 ರನ್ ಟಾರ್ಗೆಟ್ ನೀಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆರಂಭಿಕ ಹಂತದಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿತ್ತು. ಡಾರ್ಕಿ ಶಾರ್ಟ್ 7 ರನ್ ಸಿಡಿಸಿ ಔಟಾದರೆ, ನಾಯಕ ಆ್ಯರೋನ್ ಫಿಂಚ್ 27 ರನ್ ಸಿಡಿಸಿ ಔಟಾದರು. ಇನ್ನು ಕ್ರಿಸ್ ಲಿನ್ 37 ರನ್ ಸಿಡಿಸಿದರು.

3 ವಿಕೆಟ್ ಕಳೆದುಕೊಂಡ ಆಸ್ಟ್ರೇಲಿಯಾಗೆ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಮಾರ್ಕಸ್ ಸ್ಟೊಯಿನಿಸ್ ಆಸರೆಯಾದರು. ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಈ ಜೋಡಿ ಆಸಿಸ್ ತಂಡವನ್ನ 150ರ ಗಡಿ ದಾಟಿಸಿದರು. ಆದರೆ ಮಳೆಯಿಂದಾಗಿ ಪಂದ್ಯವನ್ನ 

ಮಳೆಯಿಂದಾಗಿ ಪಂದ್ಯ ಕೆಲ ಕಾಲ ಸ್ಥಗಿತಗೊಂಡಿತು ಮಳೆ ಬಳಿಕ ಮತ್ತೆ ಒಂದು ಓವರ್ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 4 ವಿಕೆಟ್ ನಷ್ಟಕ್ಕೆ 158 ರನ್ ಸಿಡಿಸಿತು. ಈ ಮೂಲಕ ಪಂದ್ಯವನ್ನ 17 ಓವರ್‌ಗೆ ಸೀಮಿತಗೊಳಿಸಲಾಯ್ತು. ಡಕ್‌ವರ್ತ್ ನಿಯಮದ ಪ್ರಕಾರ ಭಾರತಕ್ಕೆ 174 ರನ್ ಟಾರ್ಗೆಟ್ ನೀಡಲಾಗಿದೆ.