ಬ್ರಿಸ್ಬೇನ್(ನ.21): ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿರುವ 174 ರನ್ ಬೃಹತ್ ಟಾರ್ಗೆಟ್ ಬೆನ್ನಟ್ಟುತ್ತಿರುವ ಟೀಂ ಇಂಡಿಯಾಗೆ ಶಿಖರ್ ಧವನ್ ಆಸರೆಯಾಗಿದ್ದಾರೆ. ಆದರೆ ರೋಹಿತ್ ಶರ್ಮಾ,ಕೆಎಲ್ ರಾಹುಲ್ ಹಾಗೂ ನಾಯಕ ವಿರಾಟ್ ಕೊಹ್ಲಿ ಬಹುಬೇಗನೆ ಪೆವಿಲಿಯನ್ ಸೇರಿಕೊಂಡಿದ್ದಾರೆ.

ಶಿಖರ್ ಧವನ್ ಆಕರ್ಷಕ ಅರ್ಧಶತಕ ಸಿಡಿಸಿ ಆಸರೆಯಾದರು. ಟಿ20 ಕ್ರಿಕೆಟ್‌ನಲ್ಲಿ 9ನೇ ಹಾಫ್ ಸೆಂಚುರಿ ಸಿಡಿಸಿದರು. ಆದರೆ ಧವನ್‌ಗೆ ಟೀಂ ಇಂಡಿಯಾದ ಇತರ ಯಾವ ಬ್ಯಾಟ್ಸ್‌ಮನ್‌ಗಳಿಂದಲೂ ಉತ್ತಮ ಸಾಥ್ ಸಿಗಲಿಲ್ಲ. ಧವನ್ 76 ರನ್ ಸಿಡಿಸಿ ಔಟಾದರು.

ಮಳೆಯಿಂದಾಗಿ ಪಂದ್ಯವನ್ನ 17 ಓವರ್‌ಗೆ ಸೀಮಿತಗೊಳಿಸಲಾಗಿದೆ. ಹೀಗಾಗಿ ಆಸ್ಟ್ರೇಲಿಯಾ 17 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 158 ರನ್ ಸಿಡಿಸಿತು. ಡಕ್‌ವರ್ತ್ ನಿಯಮದಿಂದಾಗಿ ಭಾರತಕ್ಕೆ 174 ರನ್ ಟಾರ್ಗೆಟ್ ನೀಡಲಾಯಿತು.