ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ20 ಸರಣಿ ಅಂತ್ಯಗೊಂಡಿದೆ. ರೋಚಕ ಘಟ್ಟದತ್ತ ಸಾಗಿದ ಸರಣಿ 1-1 ಅಂತರದಲ್ಲಿ ಸಮಬಲಗೊಂಡಿದೆ. ಸಿಡ್ನಿಯಲ್ಲಿ ನಡೆದ ಅಂತಿಮ ಪಂದ್ಯದ ಹೈಲೈಟ್ಸ್ ಇಲ್ಲಿದೆ. 

ಸಿಡ್ನಿ(ನ.25) : ಆಸ್ಟ್ರೇಲಿಯಾ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನ 1-1 ಅಂತರದಲ್ಲಿ ಸಮಬಲಗೊಳಿಸಿದೆ. 

Scroll to load tweet…

ಆಸ್ಟ್ರೇಲಿಯಾ ನೀಡಿದ 165 ರನ್ ಟಾರ್ಗೆಟ್ ಬೆನ್ನಟ್ಟಿದ ಟೀಂ ಇಂಡಿಯಾಗೆ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 67 ರನ್ ಜೊತೆಯಾಟ ನೀಡಿದರು. ಧವನ್ 22 ಎಸೆತದಲ್ಲಿ 41 ರನ್ ಸಿಡಿಸಿ ಔಟಾದರು.

ರೋಹಿತ್ ಶರ್ಮಾ 23 ರನ್ ಸಿಡಿಸಿ ಔಟಾದರು. ಆದರೆ ನಾಯಕ ವಿರಾಟ್ ಕೊಹ್ಲಿ ಆಸರೆಯಾದರು. ಮೊದಲೆರಡು ಪಂದ್ಯದಲ್ಲಿ ನಿರಾಸೆ ಅನುಭವಿಸಿದ ಕೆಎಲ್ ರಾಹುಲ್ ಅಂತಿಮ ಪಂದ್ಯದಲ್ಲೂ ಅಬ್ಬರಿಸಲಿಲ್ಲ. 14 ರನ್ ಸಿಡಿಸಿ ಪೆವಿಲಿಯನ್ ಸೇರಿಕೊಂಡರು. ಇನ್ನು ಅವರಸರದ ರಿಷಬ್ ಪಂತ್ ಶೂನ್ಯಕ್ಕೆ ಔಟಾದರು.

ವಿರಾಟ್ ಕೊಹ್ಲಿ ಹಾಗೂ ದಿನೇಶ್ ಕಾರ್ತಿಕ್ ಹೋರಾಟ ಭಾರತೀಯರಲ್ಲಿ ಮತ್ತೆ ಗೆಲುವಿನ ಆಸೆ ಚಿಗುರಿಸಿತು. ಕೊಹ್ಲಿ ಹಾಫ್ ಸೆಂಚುರಿ ಸಿಡಿಸೋ ಮೂಲಕ ಟೀಂ ಇಂಡಿಯಾ ಗೆಲುವಿನತ್ತ ದಾಪುಗಾಲಿಟ್ಟಿತು. ಕೊಹ್ಲಿ ಸಿಡಿಸಿದ ಅಜೇಯ 61 ರನ್ ಹಾಗೂ ಕಾರ್ತಿಕ್ ಅಜೇಯ 22 ರನ್‌ಗಳ ನೆರವಿನಿಂದ ಟೀಂ ಇಂಡಿಯಾ 19.4 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು.

ಅಂತಿಮ ಪಂದ್ಯದಲ್ಲಿ 6 ವಿಕೆಟ್ ಗೆಲುವು ಸಾಧಿಸಿದೆ ಟೀಂ ಇಂಡಿಯಾ ಸರಣಿಯನ್ನ 1-1 ಅಂತರದಲ್ಲಿ ಸಮಭಲಗೊಳಿಸಿತು. ಮೊದಲ ಪಂದ್ಯದಲ್ಲಿ ಮಳೆಯಿಂದಾಗಿ ಭಾರತ ಸೋಲು ಕಂಡರೆ, 2ನೇ ಪಂದ್ಯ ಮಳೆಯಿಂದ ರದ್ದಾಗಿತ್ತು.