ಪರ್ತ್(ಡಿ.13): ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮುಗ್ಗರಿಸಿರುವ ಆಸ್ಟ್ರೇಲಿಯಾ ಇದೀಗ 2ನೇ ಟೆಸ್ಟ್ ಪಂದ್ಯದ ಗೆಲುವಿಗೆ ಮಾಸ್ಟರ್ ಪ್ಲಾನ್ ರೆಡಿ ಮಾಡಿದೆ. ಪಂದ್ಯಕ್ಕೂ ಮೊದಲು ಪರ್ತ್ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ  ತಂಡ ಪ್ರಕಟಿಸಿದೆ.

ಇದನ್ನೂ ಓದಿ: ಇಂಡೋ-ಆಸಿಸ್ ಟೆಸ್ಟ್: ಪರ್ತ್ ಪಂದ್ಯಕ್ಕೆ ಭಾರತ ತಂಡ ಪ್ರಕಟ!

ಪರ್ತ್ ಟೆಸ್ಟ್ ಪಂದ್ಯಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.  ಆಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇದೀಗ ಪರ್ತ್ ಪಂದ್ಯದಲ್ಲೂ ಕಣಕ್ಕಿಳಿಯಲಿದೆ. ಇಷ್ಟೇ ಅಲ್ಲ ಮೊದಲ ಪಂದ್ಯದ ಸೋಲಿಗೆ ತಿರುಗೇಟು ನೀಡೋ ವಿಶ್ವಾಸದಲ್ಲಿದೆ.

ಇದನ್ನೂ ಓದಿ: ಐಪಿಎಲ್ ಹರಾಜು: 3 ಕ್ರಿಕೆಟಿಗರನ್ನ ಖರೀದಿಸಲು ಸಿಎಸ್‌ಕೆ ಪ್ಲಾನ್!

ಆಸ್ಟ್ರೇಲಿಯಾ ತಂಡ: 
ಟಿಮ್ ಪೈನೆ(ನಾಯಕ), ಜೋಶ್ ಹೇಜಲ್‌ವುಡ್, ಮಿಚೆಲ್ ಮಾರ್ಶ್, ಪ್ಯಾಟ್ ಕಮಿನ್ಸ್, ಆ್ಯರೋನ್ ಫಿಂಚ್, ಪೀಟರ್ ಹ್ಯಾಂಡ್ಸ್‌ಕಾಂಬ್, ಮಾರ್ಕಸ್ ಹ್ಯಾರಿಸ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜ, ನಥನ್ ಲಿಯೋನ್, ಶಾನ್ ಮಾರ್ಶ್, ಪೀಟರ್ ಸಿಡಲ್, ಮಿಚೆಲ್ ಸ್ಟಾರ್ಕ್, ಕ್ರಿಸ್ ಟ್ರಿಮೈನ್