ಪರ್ತ್(ಡಿ.12): ಇಂಜುರಿಗೆ ತುತ್ತಾಗಿರುವ ಟೀಂ ಇಂಡಿಯಾ ಯುವ ಬ್ಯಾಟ್ಸ್‌ಮನ್ ಪೃಥ್ವಿ ಶಾ ಪರ್ತ್ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದಿದ್ದಾರೆ. ಪೃಥ್ವಿ ಶಾ ಸಂಪೂರ್ಣ ಗುಣಮುಖರಾಗಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ.

ಇದನ್ನೂ ಓದಿ: ಡೆಲ್ಲಿ ,ಕೆಕೆಆರ್ ಬಳಿಕ ಹೊಸ ತಂಡದತ್ತ ಗೌತಮ್ ಗಂಭೀರ್?

ಪೃಥ್ವಿ ಶಾ ಅನುಪಸ್ಥಿತಿಯಿಂದ ಆರಂಭಿಕನಾಗಿ ಕನ್ನಡಿಗೆ ಕೆಎಲ್ ರಾಹುಲ್‌ಗೆ ಮತ್ತೊಂದು ಅವಕಾಶ ಸಿಗಲಿದೆ. ಹೀಗಾಗಿ ಪರ್ತ್ ಟೆಸ್ಟ್‌ನಲ್ಲಿ ಕೆಎಲ್ ರಾಹುಲ್ ಹಾಗೂ ಮುರಳಿ ವಿಜಯ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. 

ಇದನ್ನೂ ಓದಿ: ಐಪಿಎಲ್ ಹರಾಜು: ದಾಖಲೆ ಬರೀತಾರ ಈ ಐವರು ಕ್ರಿಕೆಟಿಗರು?

ಅಭ್ಯಾಸ ಪಂದ್ಯದ ವೇಳೆ ಪೃಥ್ವಿ ಶಾ ಕಾಲಿನ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 31 ರನ್‌ಗಳ ಗೆಲುವು ಸಾಧಿಸಿತ್ತು. ಡಿಸೆಂಬರ್ 14 ರಿಂದ ಪರ್ತ್ ಕ್ರೀಡಾಂಗಣದಲ್ಲಿ 2ನೇ ಟೆಸ್ಟ್ ಆರಂಭವಾಗಲಿದೆ.