ಪರ್ತ್(ಡಿ.17): ಆಸ್ಟ್ರೇಲಿಯಾ ವಿರುದ್ಧದ ಪರ್ತ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸಂಕಷ್ಟದಲ್ಲಿದೆ.  ಆಸಿಸ್ ದಾಳಿಗೆ ನಲುಗಿರುವ ಭಾರತ ಇದೀಗ 5 ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ಪೃಥ್ವಿ ಶಾ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ ವಿರುದ್ಧ ಗರಂ ಆದ ಬಾಲಿವುಡ್ ನಟ!

ಆರಂಭಿಕ 2 ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕರಾದ ಮರುಳಿ ವಿಜಯ್ ಹಾಗೂ ಕೆಎಲ್ ರಾಹುಲ್ ಸಂಪೂರ್ಣ ವೈಫಲ್ಯ ಅನುಭವಿಸಿದ್ದಾರೆ. ಇತ್ತ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದ ಪೃಥ್ವಿ ಶಾ ಎಲ್ಲರ ಆಶಾಕಿರಣವಾಗಿದ್ದರು. ಆದರೆ ಪೃಥ್ವಿ ಶಾ ಇಂಜುರಿಯಿಂದ ಗುಣಮುಖರಾಗಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಿಂದ ಪೃಥ್ವಿ ಹೊರಬಿದ್ದಿದ್ದಾರೆ.

 

 

ಪೃಥ್ವಿ ಶಾ ಸ್ಥಾನಕ್ಕೆ ಕನ್ನಡಿಗ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಮಯಾಂಕ್ ಅಗರ್ವಾಲ್ ಟೀಂ ಇಂಡಿಯಾ ಆಡೋ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳೋ ಸಾಧ್ಯತೆ ಇದೆ. 3ನೇ ಟೆಸ್ಟ್ ಪಂದ್ಯದಲ್ಲಿ ಮಯಾಂಕ್ ಆರಂಭಿಕರಾಗಿ ಕಣಕ್ಕಿಳಿಯುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ. ಸದ್ಯ ಗುಜರಾತ್ ವಿರುದ್ದ ರಣಜಿ ಪಂದ್ಯ ಆಡುತ್ತಿರುವ ಮಯಾಂಕ್, ಕರ್ನಾಟಕ ರಣಜಿ ತಂಡವನ್ನ ಪ್ರತಿನಿಧಿಸುತ್ತಿದ್ದಾರೆ.

ಇದನ್ನೂ ಓದಿ: ಔಟ್/ನಾಟೌಟ್ ನೀವೇ ಹೇಳಿ: ಚರ್ಚೆಗೆ ಗ್ರಾಸವಾದ ಕೊಹ್ಲಿ ಕ್ಯಾಚ್..!

ಡಿಸೆಂಬರ್ 26 ರಿಂದ ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ 3ನೇ ಟೆಸ್ಟ್ ಆರಂಭಗೊಳ್ಳಲಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಇದೀಗ 2ನೇ ಪಂದ್ಯದಲ್ಲಿ ಗೆಲುವಿಗಾಗಿ ಹೋರಾಟ ನಡೆಸುತ್ತಿದೆ.