ದೆಹಲಿ(ಮಾ.13): ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯದಿಂದ ಕನ್ನಡಿಗ ಕೆ.ಎಲ್.ರಾಹುಲ್ ಹೊರಗಿಟ್ಟಿರೋದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಾಯಕ ವಿರಾಟ್ ಕೊಹ್ಲಿ ನಿರ್ಧಾರಗಳಿಂದ ಕ್ರಿಕೆಟಿಗರ ಕರಿಯರ್ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಚುನಾವಣಾ ದಿನಾಂಕ ನಿಗದಿ ಬೆನ್ನಲ್ಲೇ ಸಚಿನ್, ಕೊಹ್ಲಿ ನೆರವು ಕೇಳಿದ ಮೋದಿ!

ಅಂತಿಮ ಏಕದಿನ ಪಂದ್ಯದಿಂದ ಕೆ.ಎಲ್.ರಾಹುಲ್ ಹಾಗೂ ಯಜುವೇಂದ್ರ ಚಹಾಲ್ ಬದಲು ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿಗೆ ಅವಾಕಾಶ ನೀಡಿದ್ದಾರೆ. ಒಂದು ಪಂದ್ಯದಲ್ಲಿ ಅವಕಾಶ ನೀಡಿ ಮುಂದಿನ ಪಂದ್ಯದಲ್ಲೇ ವಿಶ್ರಾಂತಿ ನೀಡಿದರೆ ಸ್ಥಿರ ಪ್ರದರ್ಶನ ನೀಡಲು ಹೇಗೆ ಸಾಧ್ಯ ಎಂದು ಟ್ವಿಟರಿಗರು ಸಿಡಿದೆದ್ದಿದ್ದಾರೆ.