ಭಾರತ ವಿರುದ್ಧದ  ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಆರಂಭಿಕ ಮೇಲುಗೈ ಸಾಧಿಸಿದೆ. ಪ್ರಶಸ್ತಿಗಾಗಿ ಹೋರಾಟ ನಡೆಸುತ್ತಿರುವ ಬಾಂಗ್ಲಾದೇಶ ತಂಡದ ಬ್ಯಾಟಿಂಗ್ ಹೇಗಿದೆ? ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್.

ದುಬೈ(ಸೆ.28): ಭಾರತ ವಿರುದ್ಧದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಆರಂಭಿಕ ಬ್ಯಾಟ್ಸ್‌ಮನ್ ಲಿಟ್ಟನ್ ದಾಸ್ ಭರ್ಜರಿ ಶತಕ ಸಿಡಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿ ಲಿಟ್ಟನ್ ತಂಡಕ್ಕೆ ಆಸರೆಯಾಗಿದ್ದಾರೆ.

Scroll to load tweet…

87 ಎಸೆತದಲ್ಲಿ ಸೆಂಚುರಿ ಪೂರೈಸಿದ ಲಿಟ್ಟನ್ ದಾಸ್ 11 ಬೌಂಡರಿ ಹಾಗೂ 2 ಭರ್ಜರಿ ಸಿಕ್ಸರ್ ಸಿಡಿಸಿದರು. ದಾಸ್‌ಗೆ ಮತ್ತೊರ್ವ ಆರಂಭಿಕ ಮೆಹದಿ ಹಸನ್ ಸಾಥ್ ನೀಡಿದರು. ಆದರೆ ಮೆಹದಿ 32 ರನ್ ಸಿಡಿಸಿ ಔಟಾದರು.

ಇಮ್ರುಲ್ ಕೈಸ್, ಮುಶ್ಫಿಕರ್ ರಹೀಮ್ ಹಾಗೂ ಮೊಹಮ್ಮದ್ ಮಿಥುನ್ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಲಿಲ್ಲ. ಸದ್ಯ ಬಾಂಗ್ಲಾದೇಶ 4 ವಿಕೆಟ್ ನಷ್ಟಕ್ಕೆ 147 ರನ್ ಸಿಡಿಸಿದೆ. ಭಾರತದ ಪರ ಕೇದಾರ್ ಜಾದವ್ 2 ವಿಕೆಟ್ ಕಬಳಿಸಿ ಮಿಂಚಿದರು.