ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾಗೆ 8 ವಿಕೆಟ್ ಭರ್ಜರಿ ಗೆಲುವು

India vs england 1st odi India won by 8 wickets
Highlights

ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಗೆಲುವಿನ ಓಟ ಮುಂದುವರಿದಿದೆ. ಮೊದಲ ಏಕದಿನ ಪಂದ್ಯದಲ್ಲಿ ಕುಲದೀಪ್ ಯಾದವ್ ಸ್ಪಿನ್ ಮೋಡಿ ಹಾಗೂ ರೋಹಿತ್ ಶರ್ಮಾ ಸೆಂಚುರಿ ನೆರವಿನಿಂದ ಭಾರತ ಗೆಲುವಿನ ಸಿಹಿ ಕಂಡಿದೆ. ಈ ಪಂದ್ಯದ ಹೈಲೈಟ್ಸ್ ಇಲ್ಲಿದೆ.

ನಾಟಿಂಗ್‌ಹ್ಯಾಮ್(ಜು.12): ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಗೆಲುವಿ ಬಳಿಕ ಇದೀಗ ಏಕದಿನದಲ್ಲಿ ಟೀಂ ಇಂಡಿಯಾ ಶುಭಾರಂಭ ಮಾಡಿದೆ. ಟ್ರೆಂಟ್‌ಬ್ರಿಡ್ಜ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ವಿಕೆಟ್ ಗೆಲುವು ಸಾಧಿಸಿದೆ.

ಇಂಗ್ಲೆಂಡ್ ನೀಡಿದ 269 ರನ್ ಗುರಿ ಬೆನ್ನಟ್ಟಿದ ಭಾರತಕ್ಕೆ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಉತ್ತಮ ಆರಂಭ ನೀಡಿದರು. ಕಳಪೆ ಫಾರ್ಮ್‌ನಲ್ಲಿದ್ದ ಧವನ್ 27 ಎಸೆತದಲ್ಲಿ 40 ರನ್ ಸಿಡಿಸಿ ಔಟಾದರು. ಮೊದಲ ವಿಕೆಟ್‌ಗೆ ಈ ಜೋಡಿ 59 ರನ್ ಜೊತೆಯಾಟ ನೀಡಿತು.

ಏಕದಿನದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಜೊತೆಯಾಟದಿಂದ ಭಾರತ ಗೆಲುವಿನತ್ತ ದಾಪುಗಾಲಿಟ್ಟಿತು. ರೋಹಿತ್ ಶರ್ಮಾ ಕೇವಲ 82 ಎಸೆತದಲ್ಲಿ ಶತಕ ಸಿಡಿಸಿದರು.

ರೋಹಿತ್‌ಗೆ ಉತ್ತಮ ಸಾಥ್ ನೀಡಿದ ವಿರಾಟ್ ಕೊಹ್ಲಿ 75 ರನ್ ಸಿಡಿಸಿ ಔಟಾದರು.  ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕನ್ನಡಿಗ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ತಂಡವನ್ನ ಗೆಲುವಿನ ದಡ ಸೇರಿಸಿದರು. ಭಾರತ 40.1 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು.

ರೋಹಿತ್ ಶರ್ಮಾ ಅಜೇಯ 137 ರನ್ ಸಿಡಿಸಿದರೆ, ಕೆಎಲ್ ರಾಹುಲ್ ಅಜೇಯ 9 ರನ್ ದಾಖಲಿಸಿದರು. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿತು.

loader