ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಟೀಂ ಇಂಡಿಯಾ ಸ್ಪಿನ್ನರ್ ಕುಲದೀಪ್ ಯಾದವ್ 5 ವಿಕೆಟ್ ಕಬಳಿಸಿ ಮಿಂಚಿದರೆ, ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿ ಭಾರತಕ್ಕೆ ಗೆಲುವು ತಂದುಕೊಟ್ಟರು. ಈ ರೋಚಕ ಪಂದ್ಯದ ಕ್ಷಣಗಳ ವೀಡಿಯೋ ಇಲ್ಲಿದೆ ನೋಡಿ

ಓಲ್ಡ್ ಟ್ರಾಫೋರ್ಡ್(ಜು.04): ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ 8 ವಿಕೆಟ್‌ಗಳ ಗೆಲುವು ಸಾಧಿಸಿದೆ. ಬೌಲಿಂಗ್‌ನಲ್ಲಿ ಕುಲದೀಪ್ ಯಾದದ್ 5 ವಿಕೆಟ್ ಕಬಳಿಸೋ ಮೂಲಕ ಇಂಗ್ಲೆಂಡ್ ತಂಡಕ್ಕೆ ಶಾಕ್ ನೀಡಿದರೆ, ಬ್ಯಾಟಿಂಗ್‌ನಲ್ಲಿ ಕೆಎಲ್ ರಾಹುಲ್ ಶತಕ ಸಿಡಿಸೋ ಮೂಲಕ ಆಂಗ್ಲರಿಗೆ ಸೋಲುಣಿಸಿದರು.

ಜೋಸ್ ಬಟ್ಲರ್ ಅಬ್ಬರದ ನಡುವೆಯೂ ಭಾರತೀಯ ಬೌಲರ್‌ಗಳು ಇಂಗ್ಲೆಂಡ್ ಕಂಡವನ್ನ 159 ರನ್‌ಗೆ ಕಟ್ಟಿಹಾಕಿದರು. 160 ರನ್ ಟಾರ್ಗೆಟ್ ಪಡೆದ ಭಾರತ 18.2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ಕೇಕೆ ಹಾಕಿತು. ರಾಹುಲ್ ಅಜೇಯ 101 ರನ್ ಸಿಡಿಸಿದರು.