ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ 4ನೇ ದಿನ ಆರಂಭದಲ್ಲೇ ಟೀಂ ಇಂಡಿಯಾ ಪ್ರಾಬಲ್ಯ ಮೆರೆದಿದೆ. ಇಂಗ್ಲೆಂಡ್ ತಂಡವನ್ನ 2ನೇ ಇನ್ನಿಂಗ್ಸ್‌ನಲ್ಲಿ  ಆಲೌಟ್ ಮಾಡಿರುವ ಟೀಂ ಇಂಡಿಯಾ   ಇದೀಗ ಟಾರ್ಗೆಟ್ ಚೇಸ್ ಮಾಡಲು ಕಣಕ್ಕಿಳಿದಿದೆ. ಇಲ್ಲಿದೆ 4ನೇ ದಿನದ ಅಪ್‌ಡೇಟ್ಸ್.

ಸೌತಾಂಪ್ಟನ್(ಸೆ.02): ಭಾರತ ಹಾಗೂ ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯ ಇದೀಗ ಅಂತಿಮ ಘಟ್ಟ ತಲುಪಿದೆ. ಸೌತಾಂಪ್ಟನ್ ಟೆಸ್ಟ್ ಪಂದ್ಯದಲ್ಲಿ ಭಾರತದ ಗೆಲುವಿಗೆ ಇಂಗ್ಲೆಂಡ್ 245 ರನ್ ಟಾರ್ಗೆಟ್ ನೀಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

8 ವಿಕೆಟ್ ನಷ್ಟಕ್ಕೆ 260 ರನ್‌ಗಳೊಂದಿಗೆ 4ನೇ ದಿನದಾಟ ಮುಂದುವರಿಸಿದೆ ಇಂಗ್ಲೆಂಡ್ ಮೊದಲ ಎಸೆತದಲ್ಲೇ ಸ್ಟುವರ್ಟ್ ಬ್ರಾಡ್ ವಿಕೆಟ್ ಕಳೆದುಕೊಂಡಿತು. 46 ರನ್ ಸಿಡಿಸಿದ ಸ್ಯಾಮ್ ಕುರ್ರನ್ ರನೌಟ್ ಆಗೋ ಮೂಲಕ ಇಂಗ್ಲೆಂಡ್ 2ನೇ ಇನ್ನಿಂಗ್ಸ್‌ನಲ್ಲಿ 271 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತದ ಗೆಲುವಿಗೆ 245 ರನ್ ಟಾರ್ಗೆಟ್ ನೀಡಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 246 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಭಾರತ 273 ರನ್ ಸಿಡಿತ್ತು. ಹೀಗಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 27 ರನ್ ಮುನ್ನಡೆ ಪಡೆದುಕೊಂಡಿತ್ತು.