ಭಾರತ-ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯ ಇದೀಗ ಕುತೂಹಲ ಘಟ್ಟ ತಲುಪಿದೆ. 3ನೇ ದಿನದಾಟದಲ್ಲಿ 2ನೇ ಇನ್ನಿಂಗ್ಸ್ ಮುಂದುವರಿಸಿರುವ ಇಂಗ್ಲೆಂಡ್ ತಂಡಕ್ಕೆ, ಕೊಹ್ಲಿ ಸೈನ್ಯ ಕಠಿಣ ಸವಾಲು ಒಡ್ಡಿದೆ. ಇಲ್ಲಿದೆ 3ನೇ ದಿನದದ ಅಪ್‌ಡೇಟ್ಸ್

ಸೌತಾಂಪ್ಟನ್(ಸೆ.01): ನಾಯಕ ಜೋ ರೂಟ್ ಬ್ಯಾಟಿಂಗ್ ನೆರವಿನಿಂದ ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಚೇತರಿಸಿಕೊಂಡಿತ್ತು. ಆದರೆ ಅರ್ಧಶತಕದ ಸನಿಹದಲ್ಲಿ ಜೋ ರೂಟ್ ರನೌಟ್ ಆಗೋ ಮೂಲಕ ಭಾರತಕ್ಕೆ ಮತ್ತೆ ಪ್ರಾಬಲ್ಯ ಸಾಧಿಸಿದೆ. 

Add Asianetnews Kannada as a Preferred SourcegooglePreferred

ತೃತೀಯ ದಿನದಾಟದಲ್ಲಿ 2ನೇ ಇನ್ನಿಂಗ್ಸ್ ಮುಂದುವರಿಸಿದೆ ಇಂಗ್ಲೆಂಡ್ ಆರಂಭದಲ್ಲೇ ಆಲಿಸ್ಟೈರ್ ಕುಕ್ ವಿಕೆಟ್ ಕಳೆದುಕೊಂಡಿತು. 12 ರನ್ ಸಿಡಿಸಿ ಕುಕ್ ಪೆವಿಲಿಯನ್ ಸೇರಿದರು. ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಪಡೆದು ಕಣಕ್ಕಿಳಿದ ಮೊಯಿನ್ ಆಲಿ 9 ರನ್ ಸಿಡಿಸಿ ಇಶಾಂತ್‌ಗೆ ವಿಕೆಟ್ ಒಪ್ಪಿಸಿದರು.

ಕೆಟನ್ ಜೆನ್ನಿಂಗ್ಸ್ ಹಾಗೂ ನಾಯಕ ಜೋ ರೂಟ್ ಜೊತೆಯಾಟದಿಂದ ಇಂಗ್ಲೆಂಡ್ ಚೇತರಿಕೆ ಕಂಡಿತ್ತು. ಆದರೆ ಜೆನ್ನಿಂಗ್ಸ್ 36 ರನ್ ಸಿಡಿಸಿ ಮೊಹಮ್ಮದ್ ಶಮಿಗೆ ವಿಕೆಟ್ ಒಪ್ಪಿಸಿದರು. ಭೋಜನ ವಿರಾಮದ ಬಳಿಕ ಜಾನಿ ಬೈರ್‌ಸ್ಟೋ ಶೂನ್ಯ ಸುತ್ತಿದರು. ಆದರೆ ನಾಯಕ ಜೋ ರೂಟ್ ತಂಡಕ್ಕೆ ಆಸರೆಯಾದರು. ರೂಟ್ 48 ರನ್ ಸಿಡಿಸಿ ರನೌಟ್‌ಗೆ ಬಲಿಯಾದರು. ಸದ್ಯ ಇಂಗ್ಲೆಂಡ್ 5 ವಿಕೆಟ್ ನಷ್ಟಕ್ಕೆ 122 ರನ್ ಸಿಡಿಸಿದೆ.

ಇಂಗ್ಲೆಂಡ್ ತಂಡವನ್ನ ಮೊದಲ ಇನ್ನಿಂಗ್ಸ್‌ನಲ್ಲಿ 246 ರನ್‌ಗಳಿಗೆ ಆಲೌಟ್ ಮಾಡಿ ಭಾರತ 273 ರನ್ ಸಿಡಿಸಿತ್ತು. ಈ ಮೂಲಕ 27 ರನ್ ಮುನ್ನಡೆ ಪಡೆದುಕೊಂಡಿತ್ತು.