Asianet Suvarna News Asianet Suvarna News

ಭಾರತ-ಇಂಗ್ಲೆಂಡ್ ಟೆಸ್ಟ್: ಅರ್ಧಶತಕ ಸಿಡಿಸಿದ ಕೊಹ್ಲಿ-ರಹಾನೆ

ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯ ಆರಂಭದಲ್ಲೇ ರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಟಾಸ್ ಸೋತು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಪ್ರದರ್ಶನ ಹೇಗಿದೆ? ಇಲ್ಲಿದೆ ಅಪ್‌ಡೇಟ್ಸ್.

India vs england kohli leading from the front brings up his half century
Author
Bengaluru, First Published Aug 18, 2018, 7:52 PM IST

ನಾಟಿಂಗ್‌ಹ್ಯಾಮ್(ಆ.18): ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅರ್ಧಶತಕ  ಸಿಡಿಸಿ ಆಸರೆಯಾಗಿದ್ದಾರೆ. ಟಾಸ್ ಸೋತು ಬ್ಯಾಟಿಂಗ್ ಇಳಿದ ಭಾರತ ಆರಂಭದಲ್ಲೇ 3 ವಿಕೆಟ್ ಕಳೆದುಕೊಂಡಿತ್ತು. ಇದೀಗ ಕೊಹ್ಲಿ ಅರ್ಧಶತಕ ನೆರವಿನಿಂದ ಭಾರತ ದಿಟ್ಟ ಹೋರಾಟ ನೀಡುತ್ತಿದೆ.

 

 

 ಶಿಖರ್ ಧವನ್ ಹಾಗೂ ಕೆಎಲ್ ರಾಹುಲ್ 60 ರನ್‌ಗಳ ಜೊತೆಯಾಟ ನೀಡಿದರು. ಆದರೆ  ಧವನ್ 35 ರನ್ ಸಿಡಿಸಿದರೆ, ರಾಹುಲ್ 23 ರನ್ ಗಳಿಸಿ ಔಟಾದರು. ಆರಂಭಿಕರ ವಿಕೆಟ್ ಪತನದ ಬಳಿಕ  ಚೇತೇಶ್ವರ ಪೂಜಾರ ಆಧಾರವಾಗಲಿಲ್ಲ.

ಪೂಜಾರ 14 ರನ್ ಸಿಡಿಸಿ ಔಟಾದರು. 82 ರನ್‌ಗೆ 3 ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾಗೆ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ಆಸರೆಯಾದರು. ಕೊಹ್ಲಿ ಅರ್ಧಶತಕ ಸಿಡಿಸಿ ಮಿಂಚಿದರೆ, ನಾಯಕನಿಗೆ ಉತ್ತಮ ಸಾಥ್ ನೀಡಿದ ರಹಾನೆ ಹಾಫ್ ಸೆಂಚುರಿ ಸಿಡಿಸಿದರು. ಈ ಮೂಲಕ ಭಾರತ 3 ವಿಕೆಟ್ ನಷ್ಟಕ್ಕೆ 181 ರನ್ ಗಡಿ ದಾಟಿದೆ.

Follow Us:
Download App:
  • android
  • ios