ಜೋ ರೂಟ್-ಇಯಾನ್ ಮಾರ್ಗನ್ ಜೊತೆಯಾಟಕ್ಕೆ ಕುಲದೀಪ್ ಬ್ರೇಕ್

https://static.asianetnews.com/images/authors/2c1b126a-9adf-5f82-ae4f-e781463685fe.jpg
First Published 14, Jul 2018, 5:55 PM IST
India vs england kuldeep yadav picks his 3rd wicket
Highlights

ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಏಕದಿನ ಪಂದ್ಯ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಈ ರೋಚಕ ಪಂದ್ಯದ ಅಪ್‌ಡೇಟ್ಸ್ ಇಲ್ಲಿದೆ.

ಲಂಡನ್(ಜು.14): ಭಾರತ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಆರಂಭಿಕ ಆಘಾತದಿಂದ ಚೇತರಿಸಿಕೊಂಡಿದ್ದ ಇಂಗ್ಲೆಂಡ್ ತಂಡ ಇದೀಗ 3ನೇ ವಿಕೆಟ್ ಕಳೆದುಕೊಂಡಿದೆ. ಈ ಮೂಲಕ ಟೀಂ ಇಂಡಿಯಾ ಸ್ಪಿನ್ನರ್ ಕುಲದೀಪ್ ಯಾದವ್ 3ನೇ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ತಂಡ ಉತ್ತಮ ಆರಂಭ ಪಡೆಯಿತು. ಜಾನಿ ಬೈರಿಸ್ಟೋ ಹಾಗೂ ಜೇಸನ್ ರಾಯ್ ಅರ್ಧಶತಕದ ಜೊತೆಯಾಟ ನೀಡಿದರು. ಬೈರಿಸ್ಟೋ 38 ರನ್ ಸಿಡಿಸಿದರೆ, ರಾಯ್ 40 ರನ್ ಕಾಣಿಕೆ ನೀಡಿದರು.

86 ರನ್‌ಗೆ 2 ವಿಕೆಟ್ ಕಳೆದುಕೊಂಡ ಇಂಗ್ಲೆಂಡ್ ತಂಡಕ್ಕೆ ಜೋ ರೂಟ್ ಹಾಗೂ ನಾಯಕ ಇಯಾನ್ ಮಾರ್ಗನ್ ಆಸರೆಯಾದರು. ಇಬ್ಬರು ಅರ್ಧಶತ ಸಿಡಿಸಿ ಮಿಂಚಿದರು. ಈ ಮೂಲಕ ಇಂಗ್ಲೆಂಡ್ ಭರ್ಜರಿ ಕಮ್‌ಬ್ಯಾಕ್ ಮಾಡಿತು.

ಭಾರತಕ್ಕೆ ಅಪಾಯದ ಸೂಚನೆ ನೀಡಿದ ರೂಟ್ ಹಾಗೂ ಮಾರ್ಗನ್ ಜೋಡಿಯನ್ನ ಬೇರ್ಪಡಿಸುವಲ್ಲಿ ಕುಲದೀಪ್ ಯಶಸ್ವಿಯಾಗಿದ್ದಾರೆ. ನಾಯಕ ಮಾರ್ಗನ್ 53 ರನ್ ಸಿಡಿಸಿ ಔಟಾಗಿದ್ದಾರೆ. ಇಂಗ್ಲೆಂಡ್ 189 ರನ್‌ಗೆ 3ನೇ ವಿಕೆಟ್ ಕಳೆದುಕೊಂಡಿದೆ.

ಇದನ್ನು ಓದಿ: ಲಾರ್ಡ್ಸ್ ಮೈದಾನದಲ್ಲಿ ಕುಲದೀಪ್ ಮೋಡಿ-ಆಂಗ್ಲರ 2ನೇ ವಿಕೆಟ್ ಪತನ
 

loader