ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕಾಗಿ ಟೀಂ ಇಂಡಿಯಾ ಹೊಟೆಲ್‌ನಿಂದ ಮೈದಾನಕ್ಕೆ ತೆರಳಿದೆ. ಹೊಟೆಲ್‌ನಿಂದ ತೆರಳುತ್ತಿರುವ ಕೊಹ್ಲಿ ಬಾಯ್ಸ್ ವೀಡಿಯೋ ಇಲ್ಲಿದೆ.
ಒಲ್ಡ್ ಟ್ರಾಫೋರ್ಡ್(ಜು.03): ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಹೊಟೆಲ್‌ನಿಂದ ಮೈದಾನಕ್ಕೆ ತೆರಳಿದೆ. ತಂಡದ ಬಸ್‌ನಲ್ಲಿ ಪ್ರಯಾಣ ಬೆಳೆಸಿದ ಕೊಹ್ಲಿ ಬಾಯ್ಸ್, ಒಲ್ಡ್ ಟ್ರಾಫೋರ್ಡ್ ಮೈದಾನಕ್ಕೆ ಆಗಮಿಸಿದ್ದಾರೆ.
ಐರ್ಲೆಂಡ್ ವಿರುದ್ಧದ ಟಿ20 ಸರಣಿ ಗೆಲುವಿನ ಬಳಿಕ ಇದೀಗ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಸರಣಿಗೆ ಸಜ್ಜಾಗಿದೆ. ಇಂದು 10 ಗಂಟೆಗೆ ಭಾರತ ಹಾಗೂ ಇಂಗ್ಲೆಂಡ್ ಮೊದಲ ಟಿ20 ಪಂದ್ಯ ಆಡಲಿದೆ. ಈ ಮೂಲಕ ಸುದೀರ್ಘ ಸರಣಿಗೆ ಚಾಲನೆ ಸಿಗಲಿದೆ.
ಇಂಗ್ಲೆಂಡ್ ವಿರುದ್ಧದ 3 ಟಿ20 ಸರಣಿ ಬಳಿಕ, 3 ಏಕದಿನ ಹಾಗೂ 5 ಟೆಸ್ಟ್ ಪಂದ್ಯಗಳ ಸರಣಿ ಆಡಲಿದೆ. ಇಂಗ್ಲೆಂಡ್ ತವರಿನಲ್ಲಿ ಆಂಗ್ಲರನ್ನ ಮಣಿಸೋ ವಿಶ್ವಾಸದಲ್ಲಿರೋ ಟೀಂ ಇಂಡಿಯಾ ಕಠಿಣ ಅಭ್ಯಾಸ ನಡೆಸಿದೆ.
