ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಗೆಲುವಿಗಾಗಿ 160 ರನ್ ಗುರಿ ಪಡೆದಿದೆ. ಈ ಗುರಿ ಬೆನ್ನಟ್ಟಲು ಕಣಕ್ಕಿಳಿದ ಭಾರತ ಟೀಂ ಇಂಡಿಯಾಗೆ ಆರಂಭದಲ್ಲೇ ಶಾಕ್ ನೀಡಿದವರು ಯಾರು? ಇಲ್ಲಿದೆ ಅಪ್‌ಡೇಟ್ಸ್

ಓಲ್ಡ್ ಟ್ರಾಫೋರ್ಡ್(ಜು.03): ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 160 ರನ್ ಟಾರ್ಗೆಟ್ ಚೇಸ್ ಮಾಡಲು ಕಣಕ್ಕಿಳಿದ ಟೀಂ ಇಂಡಿಯಾಗೆ ಆರಂಭದಲ್ಲೇ ಆಘಾತ ಎದುರಾಗಿದೆ. ಆರಂಭಿಕರಾಗಿ ಕಣಕ್ಕಿಳಿದ ಶಿಖರ್ ಧವನ್ ಬೌಂಡರಿ ಸಿಡಿಸಿದ ಬೆನ್ನಲ್ಲೇ ವಿಕೆಟ್ ಕಳೆದುಕೊಂಡಿದ್ದಾರೆ. ಈ ಮೂಲಕ ಮೊದಲ ಓವರ್‌ನಲ್ಲಿ ಭಾರತ ಮೊದಲ ವಿಕೆಟ್ ಕಳೆದುಕೊಂಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಧವನ್ ವಿಕೆಟ್ ಪತನದಿಂದ ಇದೀಗ ಕ್ರೀಸ್‌ನಲ್ಲಿರುವ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಮೇಲೆ ಜವಾಬ್ದಾರಿ ಹೆಚ್ಚಿದೆ. ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ನಿಗಧಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಸಿಡಿಸಿದೆ. ಭಾರತದ ಪರ ಕುಲದೀಪ್ ಯಾದವ್ 5 ವಿಕೆಟ್ ಕಬಳಿಸಿ ಮಿಂಚಿದರು.

ಇದನ್ನು ಓದಿ:ಭಾರತ-ಇಂಗ್ಲೆಂಡ್ ಟಿ20: ಟೀಂ ಇಂಡಿಯಾ ಗೆಲುವಿಗೆ 160 ರನ್ ಟಾರ್ಗೆಟ್