ಟೀಂ ಇಂಡಿಯಾದ 2 ವಿಕೆಟ್ ಪತನ-ಕಠಿಣವಾಗುತ್ತಿದೆ ಗೆಲುವಿನ ಹಾದಿ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 3, Aug 2018, 9:15 PM IST
India vs england Team india lose vijay and dhawan in early stage
Highlights

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ರೋಚಕ ತಿರುವು ಪೆಡೆದುಕೊಳ್ಳೋ ಸಾಧ್ಯತೆ ಇದೆ. 194 ರನ್ ಸುಲಭ ಗುರಿ ಬೆನ್ನಟ್ಟಲು ಕಣಕ್ಕಿಳಿದ ಭಾರತ ತಂಡಕ್ಕೆ ಗೆಲುವಿನ ಹಾದಿ ದುರ್ಗಮವಾಗುತ್ತಿದೆ. ಇಲ್ಲಿದೆ 3ನೇ ದಿನದ ಅಪ್‌ಡೇಟ್ಸ್.

ಎಡ್ಜ್‌ಬಾಸ್ಟನ್(ಆ.03): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಅಂತಿಮ ಘಟ್ಟ ತಲುಪುತ್ತಿದೆ. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡವನ್ನ 180 ರನ್‌ಗಳಿಗೆ ಆಲೌಟ್ ಮಾಡಿ, 194 ರನ್ ಟಾರ್ಗೆಟ್ ಪಡೆದ ಟೀಂ ಇಂಡಿಯಾ, ಆರಂಭದಲ್ಲೇ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಸುಲಭ ಗುರಿ ಬೆನ್ನಟ್ಟಲು ಕಣಕ್ಕಿಳಿದ ಟೀಂ ಇಂಡಿಯಾ, 22 ರನ್‌ಗಳಿಸುವಷ್ಟರಲ್ಲೇ ಪ್ರಮುಖ 2 ವಿಕೆಟ್ ಕಳೆದುಕೊಂಡಿದೆ. ಮುರಳಿ ವಿಜಯ್ 6 ಹಾಗೂ ಶಿಖರ್ ಧವನ್ 13 ರನ್ ಸಿಡಿಸಿ ಪೆವಿಲಿಯನ್ ಸೇರಿದ್ದಾರೆ.

3ನೇ ದಿನದಾಟದಲ್ಲಿ ಭಾರತದ ಅದ್ಬುತ ಬೌಲಿಂಗ್ ಪ್ರದರ್ಶನ ನೀಡಿತ್ತು.  ದ್ವಿತೀಯ ಇನ್ನಿಂಗ್ಸ್‌ನಲ್ಲಿ  ಇಂಗ್ಲೆಂಡ್ ತಂಡವನ್ನ ಅಲ್ಪಮೊತ್ತಕ್ಕೆ ಕಟ್ಟಿಹಾಕುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿತ್ತು. ಇಶಾಂತ್ ಶರ್ಮಾ 5, ಆರ್ ಅಶ್ವಿನ್ 3 ಹಾಗೂ ಉಮೇಶ್ ಯಾದವ್ 2 ವಿಕೆಟ್ ಕಬಳಿಸಿ ಮಿಂಚಿದರು.

loader