ಕಠಿಣವಾಯಿತು ಟೀಂ ಇಂಡಿಯಾ ಗೆಲುವಿನ ಹಾದಿ-ನಾಯಕ ಕೊಹ್ಲಿ ಔಟ್

India vs england team india top order collapse
Highlights

ಇಂಗ್ಲೆಂಡ್ ನೀಡಿದ 323 ರನ್ ಟಾರ್ಗೆಟ್ ಚೇಸ್ ಮಾಡುತ್ತಿರುವ ಟೀಂ ಇಂಡಿಯಾದ ಆತಂಕ ಹೆಚ್ಚಾಗಿದೆ. ಆರೆಂಭಿಕ ಆಘಾತದಿಂದ ಚೇತರಿಸಿಕೊಂಡಿದ್ಧ ಭಾರತ ಇದೀಗ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಈ ರೋಚಕ ಪಂದ್ಯದ ಅಪ್‌ಡೇಟ್ಸ್ ಇಲ್ಲಿದೆ.

ಲಂಡನ್(ಜು.14): ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆತಂಕ ಹೆಚ್ಚಾಗಿದೆ. ಇಂಗ್ಲೆಂಡ್  ನೀಡಿದ 323 ರನ್ ಟಾರ್ಗೆಟ್ ಬೆನ್ನಟ್ಟುತ್ತಿರುವ ಭಾರತ ತಂಡ ಇದೀಗ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡಿದೆ.

ಡಿಸೆಂಟ್ ಆರಂಭ ಪಡೆದುಕೊಂಡಿದ್ದ ಭಾರತ 49 ರನ್ ಗಳಿಸುವಷ್ಟರಲ್ಲೇ ಮೊದಲ ವಿಕೆಟ್ ಕಳೆದುಕೊಂಡಿತು. ರೋಹಿತ್ ಶರ್ಮಾ 15 ರನ್‌ಗಳಿಸಿ ನಿರ್ಗಮಿಸಿದರು. ಶಿಖರ್ ಧವನ್ 36 ರನ್‌ಗಳ ಕಾಣಿಕೆ ನೀಡಿದರು.

ಭರ್ಜರಿ ಫಾರ್ಮ್‌ನಲ್ಲಿದ್ದ ಕೆಎಲ್ ರಾಹುಲ್ ಶೂನ್ಯಕ್ಕೆ ಔಟಾದರು. ಇದರೊಂದಿಗೆ ಟೀಂ ಇಂಡಿಯಾ 60 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತು. ವಿರಾಟ್ ಕೊಹ್ಲಿ ಹಾಗೂ ಸುರೇಶ್ ರೈನಾ ಜೊತೆಯಾಟದಿಂದ ಟೀಂ ಇಂಡಿಯಾ ಚೇತರಿಸಿಕೊಂಡಿತು. ಆದರೆ ಕೊಹ್ಲಿ 45 ರನ್ ಸಿಡಿಸಿ ಔಟಾದರು. ಈ ಮೂಲಕ ಟೀಂ ಇಂಡಿಯಾದ ಗೆಲುವಿನ ಹಾದಿ ಮತ್ತಷ್ಟು ಕಠಿಣವಾಗಿದೆ.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 7 ವಿಕೆಟ್ ನಷ್ಟಕ್ಕೆ 322 ರನ್ ಸಿಡಿಸಿತು. ಜೋ ರೂಟ್ ಭರ್ಜರಿ ಅಜೇಯ 113 ರನ್ ಸಿಡಿಸೋ ಮೂಲಕ ಇಂಗ್ಲೆಂಡ್ ತಂಡ ಬೃಹತ್ ಮೊತ್ತ ಪೇರಿಸುವಲ್ಲಿ ಯಶಸ್ವಿಯಾದರು.
 

loader