Asianet Suvarna News Asianet Suvarna News

ಭಾರತ-ಇಂಗ್ಲೆಂಡ್ ಟೆಸ್ಟ್: ಸೆಂಚುರಿ ವೀರ ಜೋಸ್ ಬಟ್ಲರ್ ಔಟ್

ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಟೀಂ ಇಂಡಿಯಾ ಮತ್ತೆ ಕಮ್‌ಬ್ಯಾಕ್ ಮಾಡಿದೆ ಜೋಸ್ ಬಟ್ಲರ್ ಅಬ್ಬರಕ್ಕೆ ತತ್ತರಿಸಿದ ಟೀಂ ಇಂಡಿಯಾಗೆ ವಿಕೆಟ್ ಕಬಳಿಸಿ ಪಂದ್ಯದ ಮೇಲೆ ಹಿಡಿತ ಸಾಧಿಸಿದೆ.

India vs england test bumrah send back jos buttler and Jonny Bairstow
Author
Bengaluru, First Published Aug 21, 2018, 10:10 PM IST

ನಾಟಿಂಗ್‌ಹ್ಯಾಮ್(ಆ.21): 3ನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ಭಾರತಕ್ಕೆ ಅಪಾಯದ ಸೂಚನೆ ನೀಡಿದ್ದ ಜೋಸ್ ಬಟ್ಲರ್ ವಿಕೆಟ್ ಕಬಳಿಸುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಈ ಮೂಲಕ ಭಾರತ ಪಂದ್ಯದಲ್ಲಿ ಭರ್ಜರಿ ಕಮ್‌ಬ್ಯಾಕ್ ಮಾಡಿದೆ. 

4ನೇ ದಿನದಾಟದಲ್ಲಿ  ವಿಕೆಟ್ ನಷ್ಟವಿಲ್ಲದೆ 23 ರನ್‌ಗಳೊಂದಿಗೆ ಇನ್ನಿಂಗ್ಸ್ ಮುಂದುವರಿಸಿದ ಇಂಗ್ಲೆಂಡ್ ಆರಂಭದಲ್ಲೇ ಕೆಟನ್ ಜೆನ್ನಿಂಗ್ಸ್ ವಿಕೆಟ್ ಕಳೆದುಕೊಂಡಿತು.  ಅಲಿಸ್ಟೈರ್ ಕುಕ್ 17 ರನ್ ಸಿಡಿಸಿ ಔಟಾಗಿದರು. 

ಟೀಂ ಇಂಡಿಯಾ ವೇಗಿಗಳ ದಾಳಿಗೆ ತತ್ತರಿಸಿದ ಇಂಗ್ಲೆಂಡ್, ಜೋ ರೂಟ್ ಹಾಗೂ ಒಲ್ಲಿ ಪೋಪ್ ವಿಕೆಟ್ ಕಳೆದುಕೊಂಡಿತು. ಆದರೆ ಜೋಸ್ ಬಟ್ಲರ್ ಹಾಗೂ ಬೆನ್ ಸ್ಟೋಕ್ಸ್ ಜೊತೆಯಾಟ ಭಾರತಕ್ಕೆ ಅಪಾಯದ ಸೂಚನೆ ನೀಡಿತು.

ಜೋಸ್ ಬಟ್ಲರ್ ಭರ್ಜರಿ ಶತಕ ಸಿಡಿಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಶತಕ ಸಿಡಿಸಿದ ಹೆಗ್ಗಳಿಕೆಗೆ ಪಾತ್ರರಾದರು.  ಇತ್ತ ಬಟ್ಲರ್‌ಗೆ ಉತ್ತಮ ಸಾಥ್ ನೀಡಿದ ಬೆನ್ ಸ್ಟೋಕ್ಸ್ ಅರ್ಧಶತಕ ಸಿಡಿಸಿ ಆಸರೆಯಾಗಿದರು. .

ಭಾರತ ಆತಂಕ ಹೆಚ್ಚಿಸಿದ ಬಟ್ಲರ್ 106 ರನ್ ಸಿಡಿಸಿ, ಜಸ್‌ಪ್ರೀತ್ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಜಾನಿ ಬೈರ್‌ಸ್ಟೋ ಬಂದ ಹಾಗೆ ಔಟಾದರು. ಈ ಮೂಲಕ  ಇಂಗ್ಲೆಂಡ್ 6 ವಿಕೆಟ್ ನಷ್ಟಕ್ಕೆ 235 ರನ್ ಸಿಡಿಸಿದೆ. ಈ ಮೂಲಕ ಗೆಲುವಿಗೆ 286 ರನ್ ಅವಶ್ಯಕತೆ ಇದೆ. ಭಾರತದ ಗೆಲುವಿಗೆ ಇನ್ನು 4 ವಿಕೆಟ್‌ ಕಬಳಿಸಬೇಕಿದೆ.

ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 329 ರನ್ ಸಿಡಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಇಂಗ್ಲೆಂಡ್ ಕೇವಲ 161 ರನ್‌ಗಳಿಗೆ ಆಲೌಟ್ ಆಗೋ ಮೂಲಕ 168 ರನ್ ಹಿನ್ನಡೆ ಅನುಭವಿಸಿತ್ತು. 2ನೇ ಇನ್ನಿಂಗ್ಸ್‌ನಲ್ಲಿ ಭಾರತ 7 ವಿಕೆಟ್ ನಷ್ಟಕ್ಕೆ 352 ರನ್ ಸಿಡಿಸಿ ಡೆಕ್ಲೇರ್ ಮಾಡಿಕೊಂಡಿತ್ತು.

Follow Us:
Download App:
  • android
  • ios