ಓವಲ್(ಸೆ.08): ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯ 2ನೇ ದಿನಕ್ಕೆ ಕಾಲಿಟ್ಟಿದೆ. 7 ವಿಕೆಟ್ ನಷ್ಟಕ್ಕೆ 198 ರನ್‌ಗಳೊಂದಿಗೆ ದಿನದಾಟ ಆರಂಭಿಸಿದ ಇಂಗ್ಲೆಂಡ್ ರನ್ ಕಲೆಹಾಕೋ ಲೆಕ್ಕಾಚಾರದಲ್ಲಿದೆ. ಆದರೆ ಭಾರತ ಆಂಗ್ಲರನ್ನ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಆರಂಭಿಸೋ ತವಕದಲ್ಲಿದೆ.

2ನೇ ದಿನದಾಟದಲ್ಲಿ ಜೋಸ್ ಬಟ್ಲರ್ ಹಾಗೂ ಆದಿಲ್ ರಶೀದ್ ಎಚ್ಚರಿಕೆಯ ಆಟ ಪ್ರದರ್ಶಿಸುತ್ತಿದ್ದಾರೆ.  ಬಟ್ಲರ್ ಆಜೇಯ 12 ಹಾಗೂ ಆದಿಲ್ ರಶೀದ್ ಅಜೇಯ 9 ರನ್ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದಾರೆ.

ಸದ್ಯ ಇಂಗ್ಲೆಂಡ್ 7 ವಿಕೆಟ್ ನಷ್ಟಕ್ಕೆ 201 ರನ್ ಸಿಡಿಸಿದೆ. ಮೊದಲ ದಿನ ಭಾರತದ ಪರ ಇಶಾಂತ್ ಶರ್ಮಾ 3, ಜಸ್‌ಪ್ರೀತ್ ಬುಮ್ರಾ 2 ಹಾಗೂ ರವೀಂದ್ರ ಜಡೇಜಾ 2 ವಿಕೆಟ್ ಪಡೆದು ಮಿಂಚಿದ್ದಾರೆ.