ಭಾರತ ಹಾಗೂ ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯ ತೃತೀಯ ದಿನ ಇಂಗ್ಲೆಂಡ್ ವಿಕೆಟ್ ಕಳೆದುಕೊಂಡರು ಉತ್ತಮ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಭಾರತಕ್ಕೇ ತಿರುಗೇಟು ನೀಡೋ ಸೂಚನೆ ನೀಡಿದೆ. 3ನೇ ದಿನದಾಟದ ಹೈಲೈಟ್ಸ್ ಇಲ್ಲಿದೆ.

ಸೌತಾಂಪ್ಟನ್(ಸೆ.01): ಭಾರತ ಹಾಗೂ ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯ ಕುತೂಹಲ ಘಟ್ಟ ತಲುಪಿದೆ. 3 ದಿನದಾಟದಲ್ಲಿ ಭಾರತ 8 ವಿಕೆಟ್ ಕಬಳಿಸಿ ಅಬ್ಬರಿಸಿದ್ದರೂ, ಇಂಗ್ಲೆಂಡ್ ಉತ್ತಮ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಗಿದೆ.

Add Asianetnews Kannada as a Preferred SourcegooglePreferred

ತೃತೀಯ ದಿನದಾಟದಲ್ಲಿ 2ನೇ ಇನ್ನಿಂಗ್ಸ್ ಮುಂದುವರಿಸಿದೆ ಇಂಗ್ಲೆಂಡ್ ಆರಂಭದಲ್ಲೇ ಆಲಿಸ್ಟೈರ್ ಕುಕ್ ವಿಕೆಟ್ ಕಳೆದುಕೊಂಡಿತು. 12 ರನ್ ಸಿಡಿಸಿ ಕುಕ್ ಪೆವಿಲಿಯನ್ ಸೇರಿದರು. ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಪಡೆದು ಕಣಕ್ಕಿಳಿದ ಮೊಯಿನ್ ಆಲಿ 9 ರನ್ ಸಿಡಿಸಿ ಇಶಾಂತ್‌ಗೆ ವಿಕೆಟ್ ಒಪ್ಪಿಸಿದರು.

ಕೆಟನ್ ಜೆನ್ನಿಂಗ್ಸ್ ಹಾಗೂ ನಾಯಕ ಜೋ ರೂಟ್ ಜೊತೆಯಾಟದಿಂದ ಇಂಗ್ಲೆಂಡ್ ಚೇತರಿಕೆ ಕಂಡಿತ್ತು. ಆದರೆ ಜೆನ್ನಿಂಗ್ಸ್ 36 ರನ್ ಸಿಡಿಸಿ ಮೊಹಮ್ಮದ್ ಶಮಿಗೆ ವಿಕೆಟ್ ಒಪ್ಪಿಸಿದರು. ಭೋಜನ ವಿರಾಮದ ಬಳಿಕ ಜಾನಿ ಬೈರ್‌ಸ್ಟೋ ಶೂನ್ಯ ಸುತ್ತಿದರು. ಆದರೆ ನಾಯಕ ಜೋ ರೂಟ್ ತಂಡಕ್ಕೆ ಆಸರೆಯಾದರು. ರೂಟ್ 48 ರನ್ ಸಿಡಿಸಿ ರನೌಟ್‌ಗೆ ಬಲಿಯಾದರು. 

ಬಟ್ಲರ್ ಹಾಗೂ ಸ್ಟೋಕ್ಸ್ ಜೊತೆಯಾಟದಿಂದ ಇಂಗ್ಲೆಂಡ್ ಬೃಹತ್ ಮೊತ್ತದ ಸೂಚನೆ ನೀಡಿತು. ಆದರೆ ಸ್ಟೋಕ್ಸ್ 30 ರನ್ ಸಿಡಿಸಿ ಔಟಾದರು. ಆದರೆ ಜೋಸ್ ಬಟ್ಲರ್ ಅರ್ಧಶತಕ ಸಿಡಿಸಿ ಇಂಗ್ಲೆಂಡ್ ತಂಡಕ್ಕೇ ಚೇತರಿಕೆ ನೀಡಿದರು. ಆದರೆ ಬಟ್ಲರ್ 69 ರನ್ ಸಿಡಿಸಿ ಔಟಾದರು. ಇನ್ನು ಆದಿಲ್ ರಶೀದ್ 11 ರನ್ ಸಿಡಿಸಿ ಔಟಾಗುತ್ತಿದ್ದಂತೆ ದಿನದಾಟ ಅಂತ್ಯಗೊಳಿಸಲಾಯಿತು. 3ನೇ ದಿನದಾಟದಲ್ಲಿ ಇಂಗ್ಲೆಂಡ್ 8 ವಿಕೆಟ್ ನಷ್ಟಕ್ಕೆ 260 ರನ್ ಸಿಡಿಸಿತು. ಈ ಮೂಲಕ 233 ರನ್ ಮುನ್ನಡೆ ಪಡೆದುಕೊಂಡಿದೆ.