ನಾಟಿಂಗ್‌ಹ್ಯಾಮ್(ಆ.18):ಭಾರತ ವಿರುದ್ದದ 3ನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದೆ. ವಿಶೇಷ ಅಂದರೆ  ಟೀಂ ಇಂಡಿಯಾದಲ್ಲಿ 3 ಬದಲಾವಣೆ ಮಾಡಲಾಗಿದೆ. 

 

 

ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರೆ, ವೇಗಿ ಜಸ್‌ಪ್ರೀತ್ ಬುಮ್ರಾ ಕಮ್‌ಬ್ಯಾಕ್ ಮಾಡಿದ್ದಾರೆ. ಇನ್ನು ಮುರಳಿ ವಿಜಯ್ ಬದಲು ಶಿಖರ್ ಧವನ್ ಸ್ಥಾನ ಪಡೆದಿದ್ದಾರೆ.  ಈ ಮೂಲಕ ವಿರಾಟ್ ಕೊಹ್ಲಿ 3 ಬದಲಾವಣೆ ಮಾಡಿದ್ದಾರೆ. 

ಇಂಗ್ಲೆಂಡ್ ವಿರುದ್ದದ ಆರಂಭಿಕ 2 ಟೆಸ್ಟ್ ಪಂದ್ಯ ಸೋತಿರುವ ಟೀಂ ಇಂಡಿಯಾ ಇಂದಿನ ಪಂದ್ಯ ಗೆಲ್ಲಲೇಬೇಕಾದ ಒತ್ತಡಲ್ಲಿದೆ. ಈ ಪಂದ್ಯದ  ಫಲಿತಾಂಶ ಸರಣಿ ನಿರ್ಧರಿಸಲಿದೆ.