Asianet Suvarna News Asianet Suvarna News

5ನೇ ಟೆಸ್ಟ್: ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 332ರನ್‌ಗೆ ಆಲೌಟ್

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ದಿಟ್ಟ ಹೋರಾಟ ನೀಡುತ್ತಿದೆ. ಮೊದಲ ದಿನ ಭಾರತ ಮೇಲುಗೈ ಸಾಧಿಸಿದರೆ, ಇದೀಗ  ದ್ವಿತೀಯ ದಿನ ಇಂಗ್ಲೆಂಡ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದೆ.ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್

India vs england test first innings host all out by 332 runs
Author
Bengaluru, First Published Sep 8, 2018, 6:46 PM IST

ಓವಲ್(ಸೆ.08): ಭಾರತ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಲ್ಲಿದ್ದ ಇಂಗ್ಲೆಂಡ್ ಇದೀಗ 332 ರನ್‌ಗಳಿಗೆ ಆಲೌಟ್ ಆಗಿದೆ. 

7 ವಿಕೆಟ್ ನಷ್ಟಕ್ಕೆ 198 ರನ್‌ಗಳೊಂದಿಗೆ ದಿನದಾಟ ಆರಂಭಿಸಿದ ಇಂಗ್ಲೆಂಡ್  ಆರಂಭದಲ್ಲೇ ಆದಿಲ್ ರಶೀದ್ ವಿಕೆಟ್ ಕಳೆದುಕೊಂಡಿತು. ಆದರೆ ಜೋಸ್ ಬಟ್ಲರ್ ಹಾಗೂ ಸ್ಟುವರ್ಟ್ ಬ್ರಾಡ್ ಜೊತೆಯಾಟಕ್ಕೆ ಟೀಂ ಇಂಡಿಯಾ ಸುಸ್ತಾಯಿತು.

ಅರ್ಧಶತಕ ಸಿಡಿಸಿ ಮುನ್ನಗ್ಗುತ್ತಿರುವ ಜೋಸ್ ಬಟ್ಲರ್ ಟೀಂ ಇಂಡಿಯಾಗೆ ತಲೆನೋವಾಗಿ ಪರಿಣಮಿಸಿದರು.  ಬಟ್ಲರ್‌ಗೆ ಉತ್ತಮ ಸಾಥ್ ನೀಡಿದ ಸ್ಟುವರ್ಟ್ ಬ್ರಾಡ್ 38 ರನ್ ಸಿಡಿಸಿ ಔಟಾದರು. 

ಅಬ್ಬರಿಸಿದ ಜೋಸ್ ಬಟ್ಲರ್ 89 ರನ್ ಸಿಡಿಸಿ ಔಟಾದರು. ಈ ಮೂಲಕ ಇಂಗ್ಲೆಂಡ್ 332 ರನ್‌ಗಳಿಗೆ ಆಲೌಟ್ ಆಯಿತು. ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ 4 ವಿಕೆಟ್ ಕಬಳಿಸಿ ಮಿಂಚಿದರು.
 

Follow Us:
Download App:
  • android
  • ios