ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್‌ನಲ್ಲಿ ಹಿನ್ನಡೆಯಾದರೂ, ಗೆಲುವಿನ ವಿಶ್ವಾಸದಲ್ಲಿದೆ. ಸೋಲಿನ ಅಂತರ ಕಡಿಮೆ ಮಾಡಿಕೊಳ್ಳಲು ಟೀಂ ಇಂಡಿಯಾ 2 ಬದಲಾವಣೆ ಮಾಡಿದೆ.
ಓವಲ್(ಸೆ.07): ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಟಾಸ್ ಪ್ರಕ್ರಿಯ ಮುಗಿದಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಬದಲು, ಯುವ ಬ್ಯಾಟ್ಸ್‌ಮನ್ ಹನುಮಾ ವಿಹಾರಿ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ಇಂಜುರಿಗೆ ತುತ್ತಾಗಿರೋ ಆರ್ ಅಶ್ವಿನ್ ಬದಲು, ರವೀಂದ್ರ ಜಡೇಜಾಗೆ ಅವಕಾಶ ನೀಡಲಾಗಿದೆ. ಈ ಮೂಲಕ ಟೀಂ ಇಂಡಿಯಾ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
