Asianet Suvarna News Asianet Suvarna News

ಭಾರತ-ಇಂಗ್ಲೆಂಡ್ ಟೆಸ್ಟ್: ಅರ್ಧಶತಕ ಸಿಡಿಸಿ ಆಸರೆಯಾದ ಬಟ್ಲರ್

ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಭಾರತ ಮೇಲುಗೈ ಸಾಧಿಸಿದೆ. ಈ ಮೂಲಕ  ಕಳೆದೆರಡು ಟೆಸ್ಟ್ ಪಂದ್ಯದ ಸೋಲಿಗೆ ತಿರುಗೇಟು ನೀಡಲು ಟೀಂ ಇಂಡಿಯಾ ಸಜ್ಜಾಗಿದೆ.

India vs england test jose buttler and ben stokes partnership threatening india
Author
Bengaluru, First Published Aug 21, 2018, 7:53 PM IST

ನಾಟಿಂಗ್‌ಹ್ಯಾಮ್(ಆ.21): ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯವನ್ನ ನಾಲ್ಕೇ ದಿನಕ್ಕೆ ಮುಗಿಸೋ ಟೀಂ ಇಂಡಿಯಾ ಲೆಕ್ಕಾಚಾರಕ್ಕೆ ಇಂಗ್ಲೆಂಡ್ ಬ್ರೇಕ್ ಹಾಕೋ ಎಲ್ಲಾ ಲಕ್ಷಣಗಳು ಕಾಣ್ತಿವೆ. ಜೋಸ್ ಬಟ್ಲರ್ ಹಾಗೂ ಬೆನ್ ಸ್ಟೋಕ್ಸ್ ಸಿಡಿಸಿದ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್ ತಿರುಗೇಟು ನೀಡಿದೆ.

3ನೇ ದಿನದಾಟ ಅಂತ್ಯದಲ್ಲಿ ವಿಕೆಟ್ ನಷ್ಟವಿಲ್ಲದೆ 23 ರನ್‌ಗಳಿಸಿದ್ದ ಇಂಗ್ಲೆಂಡ್, ಇಂದು ಆರಂಭದಲ್ಲೇ ಕೆಟನ್ ಜೆನ್ನಿಂಗ್ಸ್ ವಿಕೆಟ್ ಕಳೆದುಕೊಂಡಿತು.  ಅಲಿಸ್ಟೈರ್ ಕುಕ್ 17 ರನ್ ಸಿಡಿಸಿ ಔಟಾಗಿದರು. ನಾಯಕ ಜೋ ರೂಟ್ ಹಾಗೂ ಒಲ್ಲಿ ಪೋಪ್ ಜೊತೆಯಾಟ ನೀಡಲು ಹೋರಾಟ ನಡೆಸಿದರು.

ಟೀಂ ಇಂಡಿಯಾ ವೇಗಿಗಳ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಜೋ ರೂಟ್ ಹಾಗೂ ಒಲ್ಲಿ ಪೋಪ್ ವಿಕೆಟ್ ಕಳೆದುಕೊಂಡಿತು. ಆದರೆ ಜೋಸ್ ಬಟ್ಲರ್ ಹಾಗೂ ಬೆನ್ ಸ್ಟೋಕ್ಸ್ ಜೊತೆಯಾಟ ಭಾರತಕ್ಕೆ ಅಪಾಯದ ಸೂಚನೆ ನೀಡುತ್ತಿದೆ.

ಬಟ್ಲರ್  ಅರ್ಧಶತಕ ಸಿಡಿಸಿ ಮಿಂಚಿದರು. ಬಟ್ಲರ್‌ಗೆ ಉತ್ತಮ ಸಾಥ್ ನೀಡಿದ ಬೆನ್ ಸ್ಟೋಕ್ಸ್ ಟೀಂ ಇಂಡಿಯಾಗೆ ಸಂಕಷ್ಟ ತಂದೊಡ್ಡಿದ್ದಾರೆ. ಇಂಗ್ಲೆಂಡ್ 4 ವಿಕೆಟ್ ಕಳೆದುಕೊಂಡು 158 ರನ್ ಗಡಿ ದಾಟಿದೆ. ಈ ಮೂಲಕ ಗೆಲುವಿಗೆ 363 ರನ್‌ಗಳ ಅವಶ್ಯಕತೆ ಇದೆ.

ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 329 ರನ್ ಸಿಡಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಇಂಗ್ಲೆಂಡ್ ಕೇವಲ 161 ರನ್‌ಗಳಿಗೆ ಆಲೌಟ್ ಆಗೋ ಮೂಲಕ 168 ರನ್ ಹಿನ್ನಡೆ ಅನುಭವಿಸಿತ್ತು. 2ನೇ ಇನ್ನಿಂಗ್ಸ್‌ನಲ್ಲಿ ಭಾರತ 7 ವಿಕೆಟ್ ನಷ್ಟಕ್ಕೆ 352 ರನ್ ಸಿಡಿಸಿ ಡೆಕ್ಲೇರ್ ಮಾಡಿಕೊಂಡಿತ್ತು.
 

Follow Us:
Download App:
  • android
  • ios