ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ದಿಗ್ಗಜ ಕ್ರಿಕೆಟಿಗರ ದಾಖಲೆ ಪುಡಿ ಮಾಡಲು ಸಜ್ಜಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಅಂತಿಮ 2 ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಹಾಗು ಸುನಿಲ್ ಗವಾಸ್ಕರ್ ದಾಖಲೆ ಪುಡಿಯಾಗಲಿದೆ ಎಂದು ಸೆಹ್ವಾಗ್ ಭವಿಷ್ಯ ನುಡಿದಿದ್ದಾರೆ.
ನವಹೆದಲಿ(ಆ.27): ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಬುತ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಇದೀಗ ದಾಖಲೆ ಬರೆಯಲು ಸಜ್ಜಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಅಂತಿಮ 2 ಟೆಸ್ಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ, ಟೀಂ ಇಂಡಿಯಾ ಮಾಜಿ ನಾಯಕರಾದ ರಾಹುಲ್ ದ್ರಾವಿಡ್ ಹಾಗೂ ಸುನಿಲ್ ಗವಾಸ್ಕರ್ ದಾಖಲೆ ಮುರಿಯಲಿದ್ದಾರೆ ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.
ಟೆಸ್ಟ್ ಸರಣಿಯಲ್ಲಿ ಗರಿಷ್ಠ ರನ್ ಸಿಡಿಸಿದ ದಾಖಲೆ ಬರೆಯಲು ವಿರಾಟ್ ಕೊಹ್ಲಿ ಸಜ್ಜಾಗಿದ್ದಾರೆ. ಸದ್ಯ ಕೊಹ್ಲಿ 3 ಟೆಸ್ಟ್ ಪಂದ್ಯಗಳಿಂದ 440 ರನ್ ಸಿಡಿಸಿದ್ದಾರೆ. ಒಂದೇ ಸರಣಿಯಲ್ಲಿ ಗರಿಷ್ಠ ರನ್ ಸಿಡಿಸಿದ ಪಟ್ಟಿಯಲ್ಲಿ ರಾಹುರ್ ದ್ರಾವಿಡ್ ಹಾಗೂ ಸುನಿಲ್ ಗವಾಸ್ಕರ್ ಅಗ್ರಸ್ಥಾನದಲ್ಲಿದ್ದಾರೆ.
ರಾಹುಲ್ ದ್ರಾವಿಡ್ ಸರಣಿಯೊಂದರಲ್ಲೇ 602 ರನ್ ಸಿಡಿಸಿದ್ದರೆ, ಗವಾಸ್ಕರ್ 542 ರನ್ ಬಾರಿಸಿದ್ದಾರೆ. ಇದೀಗ ಕೊಹ್ಲಿ ಅಂತಿಮ ಎರಡು ಟೆಸ್ಟ್ ಪಂದ್ಯಗಲ್ಲಿ ಈ ದಾಖಲೆ ಪುಡಿ ಮಾಡಲಿದ್ದಾರೆ ಎಂದು ಸೆಹ್ವಾಗ್ ಭವಿಷ್ಯ ನಡುದಿದ್ದಾರೆ.
