ಭಾರತ-ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯ ಇದೀಗ ಕುತೂಹಲ ಘಟ್ಟ ತಲುಪಿದೆ. 3ನೇ ದಿನದಾಟದಲ್ಲಿ 2ನೇ ಇನ್ನಿಂಗ್ಸ್ ಮುಂದುವರಿಸಿರುವ ಇಂಗ್ಲೆಂಡ್ ತಂಡಕ್ಕೆ, ಕೊಹ್ಲಿ ಸೈನ್ಯ ಕಠಿಣ ಸವಾಲು ಒಡ್ಡಿದೆ. ಇಲ್ಲಿದೆ 3ನೇ ದಿನದದ ಅಪ್‌ಡೇಟ್ಸ್

ಸೌತಾಂಪ್ಟನ್(ಸೆ.01): ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ ಚೇತರಿಕೆ ಕಂಡಿದ್ದ ಇಂಗ್ಲೆಂಡ್ ಇದೀಗ 3ನೇ ವಿಕೆಟ್ ಕಳೆದುಕೊಂಡಿದೆ. 3ನೇ ದಿನದಾಟದಲ್ಲಿ ಇನ್ನಿಂಗ್ಸ್ ಮುಂದುವರಿಸಿದ ಇಂಗ್ಲೆಂಡ್ ಆರಂಭದಲ್ಲೇ 2 ವಿಕೆಟ್ ಕಳೆದುಕೊಂಡಿತ್ತು.

Add Asianetnews Kannada as a Preferred SourcegooglePreferred

ಕಳಪೆ ಫಾರ್ಮ್‌ನಲ್ಲಿರುವ ಆಲಿಸ್ಟೈರ್ ಕುಕ್ ಮತ್ತೆ ನಿರಾಸೆ ಅನುಭವಿಸಿದರು. 12 ರನ್ ಸಿಡಿಸಿ ಕುಕ್ ಪೆವಿಲಿಯನ್ ಸೇರಿದರು. ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಪಡೆದು ಕಣಕ್ಕಿಳಿದ ಮೊಯಿನ್ ಆಲಿ 9 ರನ್ ಸಿಡಿಸಿ ಇಶಾಂತ್‌ಗೆ ವಿಕೆಟ್ ಒಪ್ಪಿಸಿದರು.

ಕೆಟನ್ ಜೆನ್ನಿಂಗ್ಸ್ ಹಾಗೂ ನಾಯಕ ಜೋ ರೂಟ್ ಜೊತೆಯಾಟದಿಂದ ಇಂಗ್ಲೆಂಡ್ ಚೇತರಿಕೆ ಕಂಡಿತ್ತು. ಆದರೆ ಜೆನ್ನಿಂಗ್ಸ್ 36 ರನ್ ಸಿಡಿಸಿ ಮೊಹಮ್ಮದ್ ಶಮಿಗೆ ವಿಕೆಟ್ ಒಪ್ಪಿಸಿದರು. ಭೋಜನ ವಿರಾಮದ ವೇಳೆಗೆ ಇಂಗ್ಲೆಂಡ್ 92ರನ್‌ಗಳಿಗೆ 3ನೇ ವಿಕೆಟ್ ಕಳೆದುಕೊಂಡು ಬ್ಯಾಟಿಂಗ್ ಮುಂದುವರಿಸಿದೆ.