ಭಾರತ-ಇಂಗ್ಲೆಂಡ್ ಟೆಸ್ಟ್: ಆಂಗ್ಲರ 3ನೇ ವಿಕೆಟ್ ಪತನ!

https://static.asianetnews.com/images/authors/2c1b126a-9adf-5f82-ae4f-e781463685fe.jpg
First Published 1, Aug 2018, 7:14 PM IST
India vs england test Shami Removes Dangerous Jennings
Highlights

ಮೊದಲ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಜೊತೆಯಾಟದ ಮೂಲಕ ಟೀಂ ಇಂಡಿಯಾ ತಲೆನೋವಾಗಿದ್ದ ಕೆಟನ್ ಜೆನ್ನಿಂಗ್ಸ್ ವಿಕೆಟ್ ಪತನಗೊಂಡಿದೆ. ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದ ಮೊದಲ ದಿನದ ಅಪ್‌ಡೇಟ್ಸ್ ಇಲ್ಲಿದೆ.

ಎಡ್ಜ್‌ಬಾಸ್ಟನ್(ಆ.01): ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಪಾಯದ ಸೂಚನೆ ನೀಡಿದ ಕೇಟನ್ ಜೆನ್ನಿಂಗ್ಸ್ ಹಾಗೂ ಜೋ ರೂಟ್ ಜೊತೆಯಾಟಕ್ಕೆ ಬ್ರೇಕ್ ಹಾಕುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ.

 

 

ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಇಂಗ್ಲೆಂಡ್ ಆರಂಭದಲ್ಲೇ ಹಿರಿಯ ಬ್ಯಾಟ್ಸ್‌ಮನ್ ಆಲಿಸ್ಟೈರ್ ಕುಕ್ ವಿಕೆಟ್ ಕಳೆದುಕೊಂಡಿತು. ಕುಕ್ ವಿಕೆಟ್ ಕಬಳಿಸಿದ ಆರ್ ಅಶ್ವಿನ್ ತಂಡಕ್ಕೆ ಮೇಲುಗೈ ತಂದುಕೊಟ್ಟಿದ್ದರು.

ಮೊದಲ ವಿಕೆಟ್ ಪತನದ ನಂತರ ಇಂಗ್ಲೆಂಡ್ ತಂಡ ಚೇತರಿಕೆ ಕಂಡಿತು. ಕೇಟನ್ ಜೆನ್ನಿಂಗ್ಸ್ ಹಾಗೂ ನಾಯಕ ಜೋ ರೂಟ್ 72 ರನ್ ಜೊತೆಯಾಟ ನೀಡಿದರು. 42 ರನ್ ಸಿಡಿಸಿ ಅರ್ಧಶತದತ್ತ ಮುನ್ನಗ್ಗುತ್ತಿದ್ದ ಜೆನ್ನಿಂಗ್ಸ್, ಮೊಹಮ್ಮದ್ ಶಮಿ ಎಸೆತದಲ್ಲಿ ವಿಕೆಟ್ ಕೈಚೆಲ್ಲಿದರು. ನಂತರ ಬಂದ ಡೇವಿಡ್ ಮಲಾನ್ ಕೇವಲ 8 ರನ್ ಗಳಿಸಿ ಪೆವಿಲಿಯನ್ ಸೇರಿದರು. ಸತತ 2 ವಿಕೆಟ್ ಕಬಳಿಸಿದ ಮೊಹಮ್ಮದ್ ಶಮಿ ಭಾರತಕ್ಕೆ ಭರ್ಜರಿ ಮೇಲುಗೈ ತಂದುಕೊಟ್ಟರು.
 

loader