ಲಂಡನ್(ಆ.15): ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ಶಿಖರ್ ಧವನ್ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿಯಬೇಕಾಯಿತು. ಕಳಪೆ ಫಾರ್ಮ್‌ನಲ್ಲಿರು ಶಿಖರ್ ಧವನ್ 3ನೇ ಟೆಸ್ಟ್ ಪಂದ್ಯಕ್ಕೆ ಕಮ್‌ಬ್ಯಾಕ್ ಮಾಡಲು ಕಸರತ್ತು ಆರಂಭಿಸಿದ್ದಾರೆ.

ಶಿಖರ್ ಧವನ್ ಸೇರಿದಂತೆ ಇಂಗ್ಲೆಂಡ್ ವಿರುದ್ಧ  ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಭಾರತ ಆರಂಭಿಕ 2 ಪಂದ್ಯಗಳನ್ನ ಸೋತು ಸರಣಿಯಲ್ಲಿ 0-2 ಹಿನ್ನಡೆಯಲ್ಲಿದೆ. ಇದೀಗ 3ನೇ ಟೆಸ್ಟ್ ಪಂದ್ಯ ಕೊಹ್ಲಿ ಸೈನ್ಯಕ್ಕೆ ಮಾಡು ಇಲ್ಲವೆ. ಈ ಪಂದ್ಯಕ್ಕೆ ಮರಳಲು ಶಿಖರ್ ಧವನ್ ಜಿಮ್‌ನಲ್ಲಿ ಕಸರತ್ತು ಆರಂಭಿಸಿದ್ದಾರೆ.

 

 

ಯಶಸ್ಸಿಗೆ ಇತರ ಯಾವುದೇ ದಾರಿಗಳಲ್ಲಿ ಕಠಿಣ ಅಭ್ಯಾಸ ಒಂದೇ ದಾರಿ ಎಂದು ಶಿಖರ್ ಧವನ್ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. ಈ ಮೂಲಕ 3ನೇ ಟೆಸ್ಟ್ ಪಂದ್ಯದಲ್ಲಿ ತಂಡ ಸೇರಿಕೊಳ್ಳಲಿದ್ದೇನೆ ಅನ್ನೋ ಸೂಚನೆ ನೀಡಿದ್ದಾರೆ.

ಆಗಸ್ಟ್ 18 ರಿಂದ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. ಲಾರ್ಡ್ಸ್ ಪಂದ್ಯದ ಹೀನಾಯ ಪ್ರದರ್ಶನದಿಂದ ಟೀಂ ಇಂಡಿಯಾದಲ್ಲಿ ಕೆಲ ಬದಲಾವಣೆಗಳಾಗೋ ಸಾಧ್ಯತೆ ಇದೆ. ಹೀಗಾಗಿ ಧವನ್ ಕಮ್‌ಬ್ಯಾಕ್ ಕುರಿತು ಯಾವುದೇ ಸ್ಪಷ್ಟತೆ ಇಲ್ಲ.