ಭಾರತ-ಇಂಗ್ಲೆಂಡ್ ನಡುವಿನ 3ನೇ ಟಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟ ನಡೆಸುತ್ತಿದೆ. ದ್ವಿತೀಯ ದಿನದಾಟದಲ್ಲಿ ಇಂಗ್ಲೆಂಡ್ ಅಲ್ಪ ಮೇಲುಗೈ ಸಾಧಿಸಿದೆ. ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್. 

ನಾಟಿಂಗ್‌ಹ್ಯಾಮ್(ಆ.19): ಟ್ರೆಂಟ್‌ಬ್ರಿಡ್ಜ್ ಟೆಸ್ಟ್ ಪಂದ್ಯದಲ್ಲಿ ಭಾರತವನ್ನ 329ರನ್‌ಗೆ ಆಲೌಟ್ ಮಾಡಿದ ಇಂಗ್ಲೆಂಡ್ ಇದೀಗ ಮೊದಲ ಇನ್ನಿಂಗ್ಸ್‌ನಲ್ಲಿ ದಿಟ್ಟ ಉತ್ತರ ನೀಡಿದೆ. ಭೋಜನ ವಿರಾಮದ ವೇಳೆಗೆ ಇಂಗ್ಲೆಂಡ್ ವಿಕೆಟ್ ನಷ್ಟವಿಲ್ಲದೆ 46 ರನ್ ಗಳಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಲಿಸ್ಟರ್ ಕುಕ್ ಅಜೇಯ 21 ಹಾಗೂ ಕೆಟನ್ ಜೆನ್ನಿಂಗ್ಸ್ ಅಜೇಯ 20 ರನ್ ಸಿಡಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ಈ ಮೂಲಕ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 283 ರನ್ ಹಿನ್ನಡೆಯಲ್ಲಿದೆ. 

Scroll to load tweet…

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 329 ರನ್‌ಗೆ ಆಲೌಟ್ ಆಯಿತು. ಆರಂಭಿಕರಾದ ಶಿಖರ್ ಧವನ್ ಹಾಗೂ ಕೆಎಲ್ ರಾಹುಲ್ 60 ರನ್‌ಗಳ ಜೊತೆಯಾಟ ನೀಡಿದ್ದರು. ಇನ್ನು ನಾಯಕ ವಿರಾಟ್ ಕೊಹ್ಲಿ 97 ರನ್ ಸಿಡಿಸಿದರೆ, ಅಜಿಂಕ್ಯ ರಹಾನೆ 81 ರನ್ ಕಾಣಿಕೆ ನೀಡಿದ್ದರು.

ಮಳೆಯಿಂದಾಗಿ ದ್ವಿತೀಯ ದಿನದಾಟ ಅಲ್ಪ ತಡವಾಗಿ ಆರಂಭಗೊಂಡಿತು. ರಿಷಬ್ ಪಂತ್ 24, ಆರ್ ಅಶ್ವಿನ 14 ರನ್ ಸಿಡಿಸಿ ಔಟಾದರು. ಮೊಹಮ್ಮದ್ ಶಮಿ ಹಾಗೂ ಜಸ್‌ಪ್ರೀತ್ ಬುಮ್ರಾ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಹೀಗಾಗಿ ಭಾರತ 329 ರನ್‌ಗೆ ಆಲೌಟ್ ಆಯಿತು. ಜೇಮ್ಸ್ ಆಂಡರ್ಸನ್, ಕ್ರಿಸ್ ವೋಕ್ಸ್ ಹಾಗೂ ಸ್ಟುವರ್ಟ್ ಬ್ರಾಡ್ ತಲಾ 3 ವಿಕೆಟ್ ಪಡೆದು ಮಿಂಚಿದರು.