ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯ ಇದೀಗ ಸಾಕಷ್ಟು ಕುತೂಹಲ ಕೆರಳಿಸಿದೆ. ಭಾರತ ತನ್ನ ಮೊದಲ ಇನ್ನಿಂಗ್ಸ್ ಅಂತ್ಯಗೊಳಿಸಿದ್ದು, ಇದೀಗ ಇಂಗ್ಲೆಂಡ್ ಬ್ಯಾಟಿಂಗ್ ಆರಂಭಿಸಲಿದೆ. ದ್ವಿತೀಯ ದಿನದಾಟದ ಅಪ್‌ಡೇಟ್ಸ್ ಇಲ್ಲಿದೆ.

ನಾಟಿಂಗ್‌ಹ್ಯಾಮ್(ಆ.19): ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 329 ರನ್‌ಗೆ ಆಲೌಟ್ ಆಗಿದೆ. 307 ರನ್‌ಗಳೊಂದಿಗೆ ದ್ವಿತೀಯ ದಿನದಾಟ ಮುಂದುವರಿಸಿದ ಟೀಂ ಇಂಡಿಯಾ ಇಂದು 22 ರನ್ ಸಿಡಿಸಿ 4 ವಿಕೆಟ್ ಕಳೆದುಕೊಂಡಿತು.

Add Asianetnews Kannada as a Preferred SourcegooglePreferred

Scroll to load tweet…

ಮೊದಲ ದಿನದಾಟದಲ್ಲಿ ಆರಂಭಿಕರಾದ ಶಿಖರ್ ಧವನ್ ಹಾಗೂ ಕೆಎಲ್ ರಾಹುಲ್ 60 ರನ್‌ಗಳ ಜೊತೆಯಾಟ ನೀಡಿದ್ದರು. ಇನ್ನು ನಾಯಕ ವಿರಾಟ್ ಕೊಹ್ಲಿ 97 ರನ್ ಸಿಡಿಸಿದರೆ, ಅಜಿಂಕ್ಯ ರಹಾನೆ 81 ರನ್ ಕಾಣಿಕೆ ನೀಡಿದ್ದರು.

ಮಳೆಯಿಂದಾಗಿ ದ್ವಿತೀಯ ದಿನದಾಟ ಅಲ್ಪ ತಡವಾಗಿ ಆರಂಭಗೊಂಡಿತು. ಚೊಚ್ಚಲ ಪಂದ್ಯ ಆಡುತ್ತಿರುವ ರಿಷಬ್ ಪಂತ್ 24 ರನ್ ಸಿಡಿಸಿ ಔಟಾದರು. ಆರ್ ಅಶ್ವಿನ್ 3 ಬೌಂಡರಿ ಮೂಲಕ 14 ರನ್ ಸಿಡಿಸಿ ಔಟಾದರು. 

ಮೊಹಮ್ಮದ್ ಶಮಿ ಹಾಗೂ ಜಸ್‌ಪ್ರೀತ್ ಬುಮ್ರಾ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಹೀಗಾಗಿ ಭಾರತ 329 ರನ್‌ಗೆ ಆಲೌಟ್ ಆಯಿತು. ಜೇಮ್ಸ್ ಆಂಡರ್ಸನ್, ಕ್ರಿಸ್ ವೋಕ್ಸ್ ಹಾಗೂ ಸ್ಟುವರ್ಟ್ ಬ್ರಾಡ್ ತಲಾ 3 ವಿಕೆಟ್ ಪಡೆದು ಮಿಂಚಿದರು.