Asianet Suvarna News Asianet Suvarna News

ಭಾರತ-ಇಂಗ್ಲೆಂಡ್ ಟೆಸ್ಟ್: ಆಂಗ್ಲರ ಆರ್ಭಟಕ್ಕೆ ಬ್ರೇಕ್

ಭಾರತ-ಇಂಗ್ಲೆಂಡ್ ನಡುವಿನ 3ನೇ ಟಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟ ನಡೆಸುತ್ತಿದೆ. ದ್ವಿತೀಯ ದಿನದಾಟದಲ್ಲಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ಆರಂಭಿಸಿದೆ. ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್

India vs england test team india break opening partnership
Author
Bengaluru, First Published Aug 19, 2018, 6:55 PM IST

ನಾಟಿಂಗ್‌ಹ್ಯಾಮ್(ಆ.19):ಟ್ರೆಂಟ್‌ಬ್ರಿಡ್ಜ್ ಟೆಸ್ಟ್ ಪಂದ್ಯದಲ್ಲಿ ಭಾರತವನ್ನ 329ರನ್‌ಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್‌ ಆರಂಭಿಸಿದ ಇಂಗ್ಲೆಂಡ್ ಇದೀಗ 2 ವಿಕೆಟ್ ಕಳೆದುಕೊಂಡಿದೆ. ಆಲಿಸ್ಟ್ರೈರ್ ಕುಕ್ ಹಾಗೂ ಕೆಟನ್ ಜೆನ್ನಿಂಗ್ಸ್ ಜೊತೆಯಾಟಕ್ಕೆ ಬ್ರೇಕ್ ಹಾಕುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ.

ಆರಂಭಿಕರಾದ ಕುಕ್ ಹಾಗೂ ಜೆನ್ನಿಂಗ್ಸ್ 54 ರನ್‌ಗಳ ಜೊತೆಯಾಟ ನೀಡೋ ಮೂಲಕ ಭಾರತಕ್ಕೆ ಅಪಾಯದ ಸೂಚನೆ ನೀಡಿದ್ದರು. ಆದರೆ ಇಶಾಂತ್ ಶರ್ಮಾ ಹಾಗೂ ಜಸ್‌ಪ್ರೀತ್ ಬುಮ್ರಾ ದಾಳಿಗೆ ಎರಡು ವಿಕೆಟ್ ಪತನಗೊಂಡಿದೆ. ನಾಯಕ ಜೋ ರೂಟ್ ಹಾಗೂ ಒಲ್ಲಿ ಪೋಪ್ ಸದ್ಯ ಇಂಗ್ಲೆಂಡ್ ಬ್ಯಾಟಿಂಗ್ ಜವಾಬ್ದಾರಿ ಹೊತ್ತಿದ್ದಾರೆ.  

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 329 ರನ್‌ಗೆ ಆಲೌಟ್ ಆಯಿತು. ಆರಂಭಿಕರಾದ ಶಿಖರ್ ಧವನ್ ಹಾಗೂ ಕೆಎಲ್ ರಾಹುಲ್ 60 ರನ್‌ಗಳ ಜೊತೆಯಾಟ ನೀಡಿದ್ದರು. ಇನ್ನು ನಾಯಕ ವಿರಾಟ್ ಕೊಹ್ಲಿ 97 ರನ್ ಸಿಡಿಸಿದರೆ,  ಅಜಿಂಕ್ಯ ರಹಾನೆ 81 ರನ್ ಕಾಣಿಕೆ ನೀಡಿದ್ದರು.  

ಮಳೆಯಿಂದಾಗಿ ದ್ವಿತೀಯ ದಿನದಾಟ ಅಲ್ಪ ತಡವಾಗಿ ಆರಂಭಗೊಂಡಿತು. ರಿಷಬ್ ಪಂತ್ 24, ಆರ್ ಅಶ್ವಿನ 14 ರನ್ ಸಿಡಿಸಿ ಔಟಾದರು. ಮೊಹಮ್ಮದ್ ಶಮಿ ಹಾಗೂ ಜಸ್‌ಪ್ರೀತ್ ಬುಮ್ರಾ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಹೀಗಾಗಿ ಭಾರತ 329 ರನ್‌ಗೆ ಆಲೌಟ್ ಆಯಿತು. ಜೇಮ್ಸ್ ಆಂಡರ್ಸನ್, ಕ್ರಿಸ್ ವೋಕ್ಸ್ ಹಾಗೂ ಸ್ಟುವರ್ಟ್ ಬ್ರಾಡ್ ತಲಾ 3 ವಿಕೆಟ್ ಪಡೆದು ಮಿಂಚಿದರು.

Follow Us:
Download App:
  • android
  • ios