ಭಾರತ ಹಾಗೂ ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯ ಇದೀಗ ತಿರುವು ಪಡೆದುಕೊಳ್ಳುತ್ತಿದೆ. ಗೆಲುವಿಗೆ 245 ರನ್ ಟಾರ್ಗೆಟ್ ಪಡೆದಿರುವ ಟೀಂ ಇಂಡಿಯಾ 2ನೇ ಇನ್ನಿಂಗ್ಸ್‌ನಲ್ಲಿ ಹಲವು ಅಡೆ ತಡೆ ಎದುರಿಸುತ್ತಿದೆ. 4ನೇ ದಿನದ ಅಪ್‌ಡೇಟ್ಸ್ ಇಲ್ಲಿದೆ.

ಸೌತಾಂಪ್ಟನ್(ಸೆ.02): ಇಂಗ್ಲೆಂಡ್ ವಿರುದ್ಧ 4ನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ವಿಶ್ವಾಸದಲ್ಲಿದ್ದ ಟೀಂ ಇಂಡಿಯಾ ಇದೀಗ ಸೋಲಿನ ಸುಳಿಗೆ ಜಾರುತ್ತಿದೆ. ಮಹತ್ವದ ಟೆಸ್ಟ್ ಪಂದ್ಯದಲ್ಲಿ 245 ರನ್ ಟಾರ್ಗೆಟ್ ಪಡೆದಿರುವ ಟೀಂ ಇಂಡಿಯಾ ಇದೀಗ ಚೇಸ್ ಮಾಡಲು ಪರದಾಡುತ್ತಿದೆ. 

ಇಂಗ್ಲೆಂಡ್ ತಂಡವನ್ನ 2ನೇ ಇನ್ನಿಂಗ್ಸ್‌ನಲ್ಲಿ 271 ರನ್‌ಗಳಿಗೆ ಆಲೌಟ್ ಮಾಡಿ, ಕಣಕ್ಕಿಳಿದ ಟೀಂ ಇಂಡಿಯಾ ಆರಂಭದಲ್ಲೇ ಕೆಎಲ್ ರಾಹುಲ್ ವಿಕೆಟ್ ಕಳೆದುಕೊಂಡಿತು. ರಾಹುಲ್ ಶೂನ್ಯ ಸುತ್ತಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿ ಮಿಂಚಿದ್ದ ಚೇತೇಶ್ವರ್ ಪೂಜಾರ 2ನೇ ಇನ್ನಿಂಗ್ಸ್‌ನಲ್ಲಿ ಕೇವಲ 5 ರನ್ ಸಿಡಿಸಿ ಔಟಾದರು. ಈ ಮೂಲಕ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 22 ರನ್ ಸಿಡಿಸಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 246 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಭಾರತ 273 ರನ್ ಸಿಡಿತ್ತು. ಹೀಗಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 27 ರನ್ ಮುನ್ನಡೆ ಪಡೆದುಕೊಂಡಿತ್ತು.