ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ದಿಟ್ಟ ಹೋರಾಟ ನೀಡುತ್ತಿದೆ. ಮೊದಲ ದಿನ ಭಾರತ ಮೇಲುಗೈ ಸಾಧಿಸಿದರೆ, ಇದೀಗ ದ್ವಿತೀಯ ದಿನ ಇಂಗ್ಲೆಂಡ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದೆ.ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್
ಓವಲ್(ಸೆ.08): 5ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನ 332 ರನ್‌ಗಳಿಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ಇದೀಗ 3ನೇ ವಿಕೆಟ್ ಕಳೆದುಕೊಂಡಿದೆ.
ಓವಲ್ ಟೆಸ್ಟ್ ಪಂದ್ಯದಲ್ಲೂ ಆರಂಭಿಕರಿಂದ ಉತ್ತಮ ಪ್ರದರ್ಶನ ಮೂಡಿ ಬರಲಿಲ್ಲ. ಶಿಖರ್ ಧವನ್ 3 ರನ್ ಸಿಡಿಸಿ ಔಟಾದರು. ಆದರೆ ಕೆಎಲ್ ರಾಹುಲ್ 37 ರನ್‌ಗಳ ಕಾಣಿಕೆ ನೀಡಿದರು.
2 ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾಗೆ ಚೇತೇಶ್ವರ್ ಪೂಜಾರ ಹಾಗೂ ನಾಯಕ ವಿರಾಟ್ ಕೊಹ್ಲಿ ಆಸರೆಯಾದರು. ತಂಡಕ್ಕೆ ಆಧಾರವಾದ ಪೂಜಾರ 37 ರನ್ ಸಿಡಿಸಿ ಔಟಾದರು. ಈ ಮೂಲಕ ಭಾರತ 3ನೇ ವಿಕೆಟ್ ಕಳೆದುಕೊಂಡಿತು. ಸದ್ಯ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 103 ರನ್ ಸಿಡಿಸಿದೆ. ನಾಯಕ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ತಂಡಕ್ಕೆ ಆಸರೆಯಾಗಿದ್ದಾರೆ.
