Asianet Suvarna News Asianet Suvarna News

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಸೋತ ಭಾರತ

ಭಾರತ ಹಾಗೂ ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯ ನಾಲ್ಕೇ ದಿನಕ್ಕೆ ಮುಕ್ತಾಯ ಕಂಡಿದೆ. ಪಂದ್ಯದ ಮೂರು ದಿನ ಪ್ರಾಬಲ್ಯ ಮೆರದಿದ್ದ ಟೀಂ ಇಂಡಿಯಾ 4ನೇ ದಿನ ಮಾಡಿದ ಸಣ್ಣ ಎಡವಟ್ಟು ತಂಡದ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ. ಇಲ್ಲಿದೆ ಸೌತಾಂಪ್ಟನ್ ಪಂದ್ಯದ ಹೈಲೈಟ್ಸ್.

India vs england test team india lost test series
Author
Bengaluru, First Published Sep 2, 2018, 9:55 PM IST

ಸೌತಾಂಪ್ಟನ್(ಸೆ.02): ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 60 ರನ್‌ಗಳ ಸೋಲು ಅನುಭವಿಸಿದೆ. ಈ ಮೂಲಕ 1-3 ಅಂತರದಲ್ಲಿ ಟೆಸ್ಟ್ ಸರಣಿ ಕೈಚೆಲ್ಲಿದೆ. 4ನೇ ಪಂದ್ಯದ ಆರಂಭದಿಂದಲೂ ಮೇಲುಗೈ ಸಾಧಿಸಿದ್ದ ಟೀಂ ಇಂಡಿಯಾ 4ನೇ ದಿನ ಕಳಪೆ ಪ್ರದರ್ಶನ ನೀಡೋ ಮೂಲಕ ಸೋಲಿಗೆ ಶರಣಾಯಿತು.

ಗೆಲುವಿಗೆ 245 ರನ್ ಟಾರ್ಗೆಟ್ ಪಡೆದಿದ್ದ ಟೀಂ ಇಂಡಿಯಾ 4ನೇ ದಿನದಾಟದಲ್ಲಿ 2ನೇ ಇನ್ನಿಂಗ್ಸ್ ಆರಂಭಿಸಿತು.  ಆರಂಭಿಕ  ಕೆಎಲ್ ರಾಹುಲ್ ಡಕೌಟ್ ಆದರು.  ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿ ಮಿಂಚಿದ್ದ ಚೇತೇಶ್ವರ್ ಪೂಜಾರ  2ನೇ ಇನ್ನಿಂಗ್ಸ್‌ನಲ್ಲಿ ಕೇವಲ 5 ರನ್ ಸಿಡಿಸಿ ಔಟಾದರು.

3 ಬೌಂಡರ್ ಸಿಡಿಸಿ ಉತ್ತಮ ಪ್ರದರ್ಶನ ನೀಡೋ ಸೂಚನೆ ನೀಡಿದ ಶಿಖರ್ ಧವನ್ 17  ರನ್ ಸಿಡಿಸಿ ಔಟಾದರು.  ಆದರೆ ನಾಯಕ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ತಂಡಕ್ಕೆ ಚೇತರಿಕೆ ನೀಡಿದರು.

ಅದ್ಬುತ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿ ಆಸರೆಯಾದರು. ಕೊಹ್ಲಿಗೆ ಅಜಿಂಕ್ಯ ರಹಾನೆ ಕೂಡ ಉತ್ತಮ ಸಾಥ್ ನೀಡಿದರು. ಆದರೆ ಹಾಫ್ ಸೆಂಚುರಿ ಸಿಡಿಸಿದ ಬೆನ್ನಲ್ಲೇ ಕೊಹ್ಲಿ ವಿಕೆಟ್ ಪತನಗೊಂಡಿತು. ಕೊಹ್ಲಿ 58 ರನ್ ಸಿಡಿಸಿ ಔಟಾದರು. ಹಾರ್ದಿಕ್ ಪಾಂಡ್ಯ ಶೂನ್ಯ ಸುತ್ತಿದರು.

ರಿಷಬ್ ಪಂತ್ ಮತ್ತೆ ನಿರಾಸೆ ಅನುಭವಿಸಿದರು.  ಪಂತ್ 18 ರನ್ ಸಿಡಿಸಿ ಔಟಾದರು.  ದಿಟ್ಟ ಹೋರಾಟ ನೀಡಿದ ಅಜಿಂಕ್ಯ ರಹಾನೆ  51 ರನ್ ಸಿಡಿಸಿ ಔಟಾದರು . ಇಶಾಂತ್ ಶರ್ಮಾ ,ಮೊಹಮ್ಮದ್ ಶಮಿ ಹೋರಾಟ ನಡೆಯಲಿಲ್ಲ.

 ಅಶ್ವಿನ್ 25 ರನ್ ಸಿಡಿಸಿ ಔಟಾದರು. ಈ ಮೂಲಕ ಟೀಂ ಇಂಡಿಯಾ 184 ರನ್‌ಗಳಿಗೆ ಆಲೌಟ್ ಆಯಿತು. ಇಷ್ಟೇ ಅಲ್ಲ 60 ರನ್‌ಗಳ ಸೋಲು ಅನುಭವಿಸಿತು. 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಇಂಗ್ಲೆಂಡ್ 3-1 ಅಂತರದಲ್ಲಿ ಸರಣಿ ಗೆಲುವು ಸಾಧಿಸಿತು. ಮೊಯಿನ್ ಆಲಿ 4 ವಿಕೆಟ್ ಕಬಳಿಸಿ ಗಮನಸೆಳೆದರು.

Follow Us:
Download App:
  • android
  • ios