ಅಂತಿಮ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ?

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 6, Sep 2018, 7:37 PM IST
India vs England test team india plan to change the squad
Highlights

ಇಂಗ್ಲೆಂಡ್ ತಂಡ ಯಾವುದೇ ಬದಲಾವಣೆ ಮಾಡದೇ ಅಂತಿಮ ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟಿಸಿದೆ. ಆದರೆ ಟೀಂ ಇಂಡಿಯಾ ಗೆಲುವಿಗಾಗಿ 2 ಬದಲಾವಣೆ ಮಾಡಲು ಮುಂದಾಗಿದೆ. ಟೀಂ ಇಂಡಿಯಾ ಬದಲಾವಣೆ ವಿವರ ಇಲ್ಲಿದೆ.

ಲಂಡನ್(ಸೆ.06): 5ನೇ ಟೆಸ್ಟ್ ಪಂದ್ಯಕ್ಕೆ ಆತಿಥೇಯ ಇಂಗ್ಲೆಂಡ್ ತಂಡ ಪ್ರಕಟಿಸಿದೆ. ಇದೀಗ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್‌ಗಾಗಿ ಕಸರತ್ತು ಆರಂಭಿಸಿದೆ. ಒವೆಲ್ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ ಮಾಡೋ ಸಾಧ್ಯತೆ ಹೆಚ್ಚಿದೆ.

ಕಳೆದ ನಾಲ್ಕು ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ವಿಭಾಗದಲ್ಲಿ ವೈಫಲ್ಯ ಅನುಭವಿಸಿತ್ತು. ಹೀಗಾಗಿ ಬ್ಯಾಟಿಂಗ್ ವಿಭಾಗವನ್ನ ಬಲಪಡಿಸಲು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಬದಲು ಯುವ ಬ್ಯಾಟ್ಸ್‌ಮನ್ ಹನುಮಾ ವಿಹಾರಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಹೀಗಾದಲ್ಲಿ ಹನುಮಾ ವಿಹಾರಿ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.

ಬೌಲಿಂಗ್ ವಿಭಾಗದಲ್ಲೂ ಒಂದು ಬದಲಾವಣೆಗೆ ಟೀಂ ಇಂಡಿಯಾ ಮುಂದಾಗಿದೆ. ಇಂಜುರಿಯಾಗಿರೋ ಸ್ಪಿನ್ನರ್ ಆರ್ ಅಶ್ವಿನ್ ಬದಲು ರವೀಂದ್ರ ಜಡೇಜಾ ಕಣಕ್ಕಿಳಿಯುವ ಸಾಧ್ಯತೆ ಇದೆ. ಜಡೇಜಾ ಕಳೆದ ನಾಲ್ಕು ಟೆಸ್ಟ್ ಪಂದ್ಯದಲ್ಲಿ ತಂಡದಿಂದ ಹೊರಗುಳಿದಿದ್ದರು.

ಕೇವಲ ಎರಡು ಬದಲಾವಣಗೆ ಮುಂದಾದರೆ ಯುವ ಬ್ಯಾಟ್ಸ್‌ಮನ್ ಪೃಥ್ವಿ ಶಾ ಅವಕಾಶಕ್ಕಾಗಿ ಕಾಯಬೇಕಿದೆ. ಈ ಮೂಲಕ ಟೀಂ ಇಂಡಿಯಾ ಅಂತಿಮ ಟೆಸ್ಟ್ ಪಂದ್ಯ ಗೆದ್ದು ಸೋಲಿನ ಅಂತರ ಕಡಿಮೆ ಮಾಡಿಕೊಳ್ಳೋ ಲೆಕ್ಕಾಚಾರದಲ್ಲಿದೆ.

loader