ಭಾರತ ಹಾಗೂ ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯ ಇದೀಗ ತಿರುವು ಪಡೆದುಕೊಳ್ಳುತ್ತಿದೆ. ಗೆಲುವಿಗೆ 245 ರನ್ ಟಾರ್ಗೆಟ್ ಪಡೆದಿರುವ ಟೀಂ ಇಂಡಿಯಾ 2ನೇ ಇನ್ನಿಂಗ್ಸ್‌ನಲ್ಲಿ ಹಲವು ಅಡೆ ತಡೆ ಎದುರಿಸುತ್ತಿದೆ. 4ನೇ ದಿನದ ಅಪ್‌ಡೇಟ್ಸ್ ಇಲ್ಲಿದೆ.

ಸೌತಾಂಪ್ಟನ್(ಸೆ.02): ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯ ಗೆದ್ದು ಸರಣಿ ಸಮಭಲ ಮಾಡೋ ಟೀಂ ಇಂಡಿಯಾ ನಿರೀಕ್ಷೆಗಳೆಲ್ಲಾ ತಲೆಕೆಳಗಾಗೋ ಲಕ್ಷಣಗಳು ಗೋಚರಿಸುತ್ತಿದೆ. 245 ರನ್ ಟಾರ್ಗೆಟ್ ಬೆನ್ನಟ್ಟುತ್ತಿರುವ ಟೀಂ ಇಂಡಿಯಾ ಇದೀಗ 3ನೇ ವಿಕೆಟ್ ಕಳೆದುಕೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂಗ್ಲೆಂಡ್ ತಂಡವನ್ನ 2ನೇ ಇನ್ನಿಂಗ್ಸ್‌ನಲ್ಲಿ 271 ರನ್‌ಗಳಿಗೆ ಆಲೌಟ್ ಮಾಡಿ, ಕಣಕ್ಕಿಳಿದ ಟೀಂ ಇಂಡಿಯಾ ಆರಂಭದಲ್ಲೇ ಕೆಎಲ್ ರಾಹುಲ್ ವಿಕೆಟ್ ಕಳೆದುಕೊಂಡಿತು. ರಾಹುಲ್ ಶೂನ್ಯ ಸುತ್ತಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿ ಮಿಂಚಿದ್ದ ಚೇತೇಶ್ವರ್ ಪೂಜಾರ 2ನೇ ಇನ್ನಿಂಗ್ಸ್‌ನಲ್ಲಿ ಕೇವಲ 5 ರನ್ ಸಿಡಿಸಿ ಔಟಾದರು.

3 ಬೌಂಡರ್ ಸಿಡಿಸಿ ಉತ್ತಮ ಪ್ರದರ್ಶನ ನೀಡೋ ಸೂಚನೆ ನೀಡಿದ ಶಿಖರ್ ಧವನ್ 17 ರನ್ ಸಿಡಿಸಿ ಔಟಾದರು. ಈ ಮೂಲಕ 22 ರನ್‌ಗಳಿಗೆ ಭಾರತ 3 ನೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.